ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಭರದಿಂದ ಸಾಗಿದೆ, ಮೇ 12 ರ ವೇಳೆ ಗೆ 10 ನೇ ತರಗತಿ ಫಲಿತಾಂಶ ಪ್ರಕಟಿಸಲು SSLC BOARD ನಿರ್ಧರಿಸಿದೆ.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ board ನಿರ್ದೇಶಕ H N ಗೋಪಾಲಕೃಷ್ಣ ರಾಜ್ಯದ 234 ಕೇಂದ್ರಗಳಲ್ಲಿ ಮೌಲ್ಯಮಾಪನ ಭರದಿಂದ ಸಾಗಿದೆ,ಮೌಲ್ಯಮಾಪನಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಆಯಾಯ ಜಿಲ್ಲಾ ಅಧಿಕಾರಿಗಳು ಮತ್ತು AC ಗಳು ಮಾಡಿಕೊಟ್ಟಿದ್ದಾರೆಂದು ತಿಳಿಸಿದರು.
ಮೌಲ್ಯಮಾಪನ ಕಾರ್ಯಕ್ಕೆ 63,796 ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ, ಮೇ 1 ಅಥವಾ 2 ರ ಒಳಗೆ ಮೌಲ್ಯಮಾಪನ ಅಂತ್ಯಗೊಳ್ಳಲಿದೆ, ಹಾಗಾಗಿ ಮೇ 12 ರಂದು SSLC ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲು ಸಕಲ ಸಿದ್ದತೆ ಮಾಡಲಾಗುತ್ತಿದೆ ಎಂದು ಗೋಪಾಲಕೃಷ್ಣ ತಿಳಿಸಿದರು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು