January 15, 2025

Newsnap Kannada

The World at your finger tips!

Suresh Kumar

ಆಗಸ್ಟ್ 10ರೊಳಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ – ಸುರೇಶ್ ಕುಮಾರ್

Spread the love

ಆಗಸ್ಟ್ 10 ರೊಳಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಘೋಷಿಸಲಾಗುವುದು.

ರಾಜ್ಯದಲ್ಲಿ 12 ಲಕ್ಷ ಪಿಯು ಸೀಟ್​ಗಳು ಲಭ್ಯವಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಪ್ರವೇಶ ಅವಕಾಶ ಇವೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸುರೇಶ್ ಕುಮಾರ್
ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್​ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ತಿಳಿಸಿದರು.

ಪ್ರಥಮ ಭಾಷೆಗೆ ಒಟ್ಟು 8,19,694 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ 7,83,881ವಿದ್ಯಾರ್ಥಿಗಳು ಹಾಜರಾಗಿದ್ದರು.

Copyright © All rights reserved Newsnap | Newsever by AF themes.
error: Content is protected !!