January 12, 2025

Newsnap Kannada

The World at your finger tips!

election , politics , JDS

ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ನಿರ್ಧಾರವೇ ಮತಿಹೀನ : ಕುಮಾರಸ್ವಾಮಿ

Spread the love

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಶಿಕ್ಷಣ ಸಚಿವರು ರದ್ದುಪಡಿಸಿದ್ದಾರೆ.
ಆದರೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಎರಡು ಹಂತಗಳಲ್ಲಿ ನಡೆಸುವುದಾಗಿ ಸಚಿವರು ಹೇಳಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಇದು ಮತಿಹೀನ ನಿರ್ಧಾರ ಎಂದು ಕಟುವಾಗಿ ಟೀಕಿಸಿದರು .

ಕುಮಾರಸ್ವಾಮಿ ಸರಣಿ ಟ್ವಿಟ್ ನಲ್ಲಿ ಹೇಳಿರುವ ಅಂಶಗಳು :

  • ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ.
  • ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ. ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು.
  • ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು.
  • ಎಸ್​​ಎಸ್​ಎಲ್​ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು.
  • ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಮಂತ್ರಿಯ ‘ಗುಮ್ಮ’ ಕಾರಣ. ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾಮಂತ್ರಿಯೋ ?
  • ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ.
Copyright © All rights reserved Newsnap | Newsever by AF themes.
error: Content is protected !!