ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಜುಲೈ 19 ಮತ್ತು ಜುಲೈ 22 ರಂದು ಎರಡು ದಿನಗಳು ನಡೆಯಲಿದೆ.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳಿಗೆ ಹೆಚ್ಚು ಹೊರೆಯಾಗದಂತೆ ಪ್ರಶ್ನೆ ಪತ್ರಿಕೆ ಗಳನ್ನು ಸಿದ್ದ ಮಾಡಲಾಗಿದೆ. ಅಲ್ಲದೇ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಪರೀಕ್ಷೆಯ ಮಹತ್ವದ ಮಾಹಿತಿ ಗಳು:
- ಜುಲೈ 19, 22ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ
- ಜುಲೈ 19ರಂದು ಕೋರ್ ವಿಷಯಗಳಾದ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ
- ಜುಲೈ 22ರಂದು ಕನ್ನಡ , ಇಂಗ್ಲಿಷ್ ಸೇರಿದಂತೆ ಭಾಷಾ ವಿಷಯಗಳ ಪರೀಕ್ಷೆ
- ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ
- ಬುಧವಾರವೇ ಹಾಲ್ ಟಿಕೆಟ್ ಬಿಡುಗಡೆ
ಈ ಬಾರಿ 8,76,581 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿ ದ್ದಾರೆ.
- ರಾಜ್ಯದಲ್ಲಿ ಒಟ್ಟು 73,066 ಪರೀಕ್ಷಾ ಕೇಂದ್ರಗಳಿರುತ್ತವೆ
- ಒಂದು ಡೆಸ್ಕ್ನಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ
- ಕೊಠಡಿಯಲ್ಲಿ 12 ಮಂದಿ ಮಾತ್ರ ಅವಕಾಶ
- ಪರೀಕ್ಷಾ ಕೇಂದ್ರದಲ್ಲಿ ಶಿಕ್ಷಕರು 8.30 ಗಂಟೆಗೆ ಹಾಜರಾಗಿರುತ್ತಾರೆ
- ಜೂನ್ 30ಕ್ಕೆ ಮಕ್ಕಳಿಗೆ ಹಾಲ್ ಟಿಕೆಟ್ ನೀಡಲಾಗುತ್ತದೆ
- ಕೊರೊನಾ ಲಕ್ಷಣಗಳಿರುವ ಮಕ್ಕಳಿಗೆ ಕೊರೊನಾ ಕೇರ್ ಸೆಂಟರ್ನಲ್ಲೇ ಪರೀಕ್ಷೆ
- ಕೊಠಡಿಯ ಮೇಲ್ವಿಚಾರಕರು ಲಸಿಕೆ ಪಡೆದಿರಲೇ ಬೇಕು
- ಎಲ್ಲಾ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ ನಿಗಾ ವಹಿಸುತ್ತಾರೆ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್