ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಈ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಶಿಕ್ಷಣ ಇಲಾಖೆ ನೀಡಿದ ಶೇ.20 ಗ್ರೇಸ್ ಅಂಕಗಳಿಗೆ ಸ್ವತಃ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಗತಿ ಪರಿಶೀಲನೆ ಸಭೆ ನಡೆದ ವೇಳೆ ಗ್ರೇಸ್ ಅಂಕ ಕೊಟ್ಟ ವಿಚಾರ ಚರ್ಚೆಗೆ ಬಂದಿದ್ದು ,ಈ ವೇಳೆ ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಗರಂ ಆದ ಸಿಎಂ, ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ಬಂದಿದೆ.
ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಅಭಿಪ್ರಾಯಗಳು ಬರುತ್ತಿವೆ.ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಈ ವರ್ಷ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೂ ಬದಲಾವಣೆ ಇಲ್ಲ. ಮುಂದಿನ ವರ್ಷದಿಂದ 20% ಗ್ರೇಸ್ ಮಾರ್ಕ್ಸ್ ಕೊಡುವ ಪದ್ಧತಿ ಇರುವುದಿಲ್ಲ ಎಂದು ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ