ಮಾಗಡಿಯಲ್ಲಿ SSLC ಪ್ರಶ್ನೆ ಪತ್ರಿಕೆ ಸೋರಿಕೆ – ಪ್ರೌಢಶಾಲೆಯ ಗುಮಾಸ್ತನ ಬಂಧನ

Team Newsnap
1 Min Read
SSLC query leak in Magadi - arrest of high school clerk

ಕಳೆದ ಮಾರ್ಚ್ ಏಪ್ರಿಲ್ ನಲ್ಲಿ ನಡೆದ SSLC ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಈಗ ಬೆಳಕಿಗೆ ಬಂದಿದೆ ಈ ಆರೋಪದಲ್ಲಿ ಪೊಲೀಸರು ಮಾಗಡಿಯ ಖಾಸಗಿ ಶಾಲೆಯ ಗುಮಾಸ್ತನೊಬ್ಬನನ್ನು ಬಂಧಿಸಿದ್ದಾರೆ.

ಇದನ್ನು ಓದಿ –ಮಳಲಿ ಮಸೀದಿಯಲ್ಲಿ ದೇವಸ್ಥಾನದ ಕುರುಹು ಪತ್ತೆ- ತಾಂಬೂಲ ಪ್ರಶ್ನೆ ಆರಂಭ

ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಗುಮಾಸ್ತ ರಂಗೇಗೌಡ ಬಂಧಿತ ಆರೋಪಿ.

ಕಳೆದ ಮಾರ್ಚ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಜ್ಞಾನ ಪತ್ರಿಕೆಯು ವಾಟ್ಸಪ್‌ ಮೂಲಕ ಸೋರಿಕೆ ಆಗಿತ್ತು. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಿತ್ತು. ಅದೇ ಸಮಯದಲ್ಲಿ ಪ್ರಶ್ನೆ ಪತ್ರಿಕೆಯನ್ನು ಹೆಡ್ ಮಾಸ್ಟರ್ ಹಾಗೂ ಶಿಕ್ಷಕರಿರುವ ಗ್ರೂಪ್‌ನಲ್ಲೇ ಶೇರ್ ಮಾಡಲಾಗಿತ್ತು.

ಕೆಂಪೇಗೌಡ ಶಾಲೆ SSLC ಫಲಿತಾಂಶದಲ್ಲಿ ಉತ್ತಮ ಸಾಧನೆಗಳಿಸಿದೆ ಇದೀಗ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ.

ರಂಗೇಗೌಡ ವಾಟ್ಸಪ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದು, ಅಲ್ಲಿನ ಒಬ್ಬ ಟೀಚರ್ ಹಾಗೂ ಮಾಧ್ಯಮದವರಿಗೆ ಮಾಹಿತಿ ದೊರೆತಿದೆ.

ಆದರೆ ಈ ಇಬ್ಬರಿಗೂ ಕ್ಲರ್ಕ್ ರಂಗೇಗೌಡ ಹಣ ನೀಡಿ ಯಾರಿಗೂ ಹೇಳದಂತೆ ತಿಳಿಸಿದ್ದ. ಆದರೆ ಈ ಆರೋಪ ಪರೀಕ್ಷೆ ಮುಗಿದು ತಿಂಗಳು ಕಳೆದ ಬಳಿಕ ಬೆಳಕಿಗೆ ಬಂದಿದೆ.

ಈ ಬಗ್ಗೆ ಮಾಗಡಿ ಇನ್ಸ್‌ಪೆಕ್ಟರ್ ಕಿವಿಗೆ ಗಾಳಿ ಮಾತು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಸಂದೇಹ ವ್ಯಕ್ತವಾಗಿ ರಂಗೇಗೌಡನನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಮನಗರ ಡಿಡಿಪಿಐ ಮಾಗಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

Share This Article
Leave a comment