SSLC ಫಲಿತಾಂಶ 2022: ಮರು ಎಣಿಕೆ, ಮೌಲ್ಯಮಾಪನ ಅರ್ಜಿ ಸಲ್ಲಿಕೆ ವಿವರ

Team Newsnap
2 Min Read

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ SSLC ಉತ್ತರ ಪತ್ರಿಕೆ ಮರು ಎಣಿಕೆ ಹಾಗೂ ಮರು ಮೌಲ್ಯಮಾಪನ ದಿನಾಂಕವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಇದನ್ನು ಓದಿ – SSLC ನಂತರ ವಿದ್ಯೆ, ಉದ್ಯೋಗದ ಬೆಳಕು!

ಮರು ಎಣಿಕೆ ಮತ್ತು ಮರು ಮೌಲ್ಯಮಾಪನ:

SSLC ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿMay 20 – May 30
ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿಗೆ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ20-05-2022
ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕ30 -05-2022
ಆನ್‌ ಲೈನ್ ಮೂಲಕ ಅಲ್ಲಿ ಸಲ್ಲಿಸಿದ ಬಳಿಕ ಬ್ಯಾಂಕ್ ನಲ್ಲಿ ಶುಲ್ಕ ಪಾವತಿಗೆ ಕೊನೆ ದಿನಾಂಕ31 -05-2022
ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ24-05-2022
ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಅರ್ಜಿ ಸಲ್ಲಿಕೆ ಕೊನೆ ದಿನಾಂಕ06 -06-2022
ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ24-05-2022
ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕ06 -06-2022

ಮರು ಮೌಲ್ಯಮಾಪನ ಮತ್ತು ಸ್ಕ್ಯಾನ್ ಪ್ರತಿ ಪಡೆಯಲು ಶುಲ್ಕ: 

SSLC ಪರೀಕ್ಷೆ ಮೌಲ್ಯಮಾಪನ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು ಒಂದು ವಿಷಯಕ್ಕೆ 410 ರೂ. ಶುಲ್ಕ ಪಾವತಿಸಬೇಕು. ಮರು ಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ 810 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಅನ್‌ಲೈನ್ ನಲ್ಲಿ ಸಲ್ಲಿಸಿದರೆ ಈ ಶುಲ್ಕ ಪಾವತಿಸಬೇಕು. ಆಫ್‌ ಲೈನ್ ಮೂಲಕ ಪಾವತಿ ಮಾಡಿದರೆ ಹೆಚ್ಚುವರಿ ಹತ್ತು ರೂ. ಪಾವತಿಸಬೇಕು.

ಇದನ್ನು ಓದಿ – ಮಂಡ್ಯದ ಇಂಡುವಾಳು ಬಳಿ ಮಳೆಗೆ ಕುಸಿದ ಸೇತುವೆ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್​ ಜಾಮ್​

ಸ್ಕ್ಯಾನ್ ಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಭೌತಿಕವಾಗಿ ಅರ್ಜಿ ಸಲ್ಲಿಸುವುದನ್ನು ರದ್ದು ಮಾಡಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್ ತಾಣ sslc.Karnataka.gov.in ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ನಿಗಧಿತ ಪೋರ್ಟ್ ಲ್ ನಲ್ಲಿ ಆನ್‌ಲೈನ್ ಮೂಲಕವೇ ಶುಲ್ಕ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಚಲನ್ ಡೌನ್‌ ಲೋನ್ ಮಾಡಿಕೊಂಡು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಹ ಶುಲ್ಕ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಸಿದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳ ಮೊಬೈಲ್ ಗೆ ಸಂದೇಶ ಬರಲಿದೆ.

Share This Article
Leave a comment