SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

Team Newsnap
1 Min Read

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಫಲಿತಾಂಶ ವಿವರ

ಬಾಲಕರು:2,87,416(65.90) ಬಾಲಕಿಯರು’-3,43,788(81.11%) SSLC ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :-

  • 1)ಉಡುಪಿ ಪ್ರಥಮ ಸ್ಥಾನ(94%)
  • 2)ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ(92.12%)
  • 3)ಶಿವಮೊಗ್ಗ (88.67%) ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲ್ಲೆ:- ಯಾದಗಿರಿ 50.59%

ಮಂಡ್ಯಕ್ಕೆ 19 ನೇ ಸ್ಥಾನ :

2023 – 24 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವು ಮಂಡ್ಯ ಜಿಲ್ಲೆಯ ಪಾಲಿಗೆ ಆಶಾದಾಯಕವಾಗಿಲ್ಲ .

ಮಂಡ್ಯ ಜಿಲ್ಲೆ ಫಲಿತಾಂಶದಲ್ಲಿ ಕುಸಿತ ಕಂಡಿದೆ.2022 23ನೇ ಸಾಲಿನಲ್ಲಿ ಸಾಲಿನಲ್ಲಿ 2ನೇ ಸ್ಥಾನದಲ್ಲಿದ್ದ ಮಂಡ್ಯ ಜಿಲ್ಲೆ ಈ ಬಾರಿ 19 ನೇ ಸ್ಥಾನಕ್ಕೆ ಕುಸಿದಿದೆ

ಈ ಬಾರಿ ಜಿಲ್ಲೆಯಲ್ಲಿ 20,529 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 15,108 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.73.59 ಫಲಿತಾಂಶ ಬಂದಿದೆ. ಇದು ಇತ್ತೀಚಿನ ವರ್ಷದಲ್ಲಿ ಬಂದ ಅತಿ ಕಳಪೆ ಫಲಿತಾಂಶವಾಗಿದೆ.

ಕಳೆದ ಸಾಲಿನಲ್ಲಿ ಶೇ.96.04 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿತ್ತು.

ಇದನ್ನು ಓದಿ –ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ



ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್ ಮಂಜುಶ್ರೀ ,ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್, SSLC ಬೋರ್ಡ್ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

Share This Article
Leave a comment