ಮೇ 3ನೇ ವಾರ SSLC Result​ :ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಕಠಿಣ rules

Team Newsnap
2 Min Read
Recruitment of 15 thousand graduate primary teachers: Provisional selection list released - Minister Nagesh 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ - ಸಚಿವ ನಾಗೇಶ್

SSLC ಪರೀಕ್ಷೆ ಫಲಿತಾಂಶ ಮೇ 3ನೇ ವಾರ ಪ್ರಕಟವಾಗಲಿದೆ, ಈಗಾಗಲೇ ಮೌಲ್ಯಮಾಪನ ಕೂಡ ಮುಗಿದಿದೆ, ಶೀಘ್ರವೇ ದಿನಾಂಕ ಪ್ರಕಟ ಮಾಡ್ತೀವಿ, ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

SSLC ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್ ನ್ನುClick ಮಾಡಿ :

http://karresults.nic.in/

ಮೇ 21, 22 ರಂದು ಶಿಕ್ಷಕ ನೇಮಕಾತಿ ಪರೀಕ್ಷೆ

ಮೇ 21, 22 ರಂದು ಶಿಕ್ಷಕ ನೇಮಕಾತಿ ಪರೀಕ್ಷೆ ನಡೆಯುತ್ತದೆ. ಯಾರು ಅಪಪ್ರಚಾರಕ್ಕೆ ಕಿವಿಗೊಡಬೇಡಿ, ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದ್ದು, 1,06,083 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು, ಚಿಕ್ಕೋಡಿಯಲ್ಲಿ ಹೆಚ್ಚು ಕೇಂದ್ರಗಳು ಇರಲಿವೆ, ಸುಮಾರು 11 ಸಾವಿರ ಅಭ್ಯರ್ಥಿಗಳು ಎಕ್ಸಾಂ ಬರೆಯುತ್ತಿದ್ದಾರೆ. ಹೀಗಾಗಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ ಎಂದು ಹೇಳಿದರು.

ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ

ಮುಂದಿನ ವಾರ ಪ್ರಾಥಮಿಕ ಶಾಲಾ ಶಿಕ್ಷಕರ ಪರೀಕ್ಷೆ ನಡೆಯಲಿದೆ. ಮೇ 21-22 ರಂದು ಎರಡು ದಿನ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಗೌಪ್ಯತೆ ಹಾಗೂ ಎರಡು ದಿನಗಳ ನಡೆಯುವ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದನ್ನು ಓದಿ : ನಾನು ಈಗ ನೀರುಗಂಟಿ ಭಡ್ತಿಗೆ SSLC ಪಾಸ್ ಆಗ್ಲೇ ಬೇಕು, ಪಾಸ್ ಮಾಡಿಕೊಡಿ – ಮೌಲ್ಯಮಾಪಕರಿಗೆ ಪತ್ರ

ಎಲೆಕ್ಟ್ರಾನಿಕ್​ ವಸ್ತುಗಳನ್ನು ತರುವಂತಿಲ್ಲ : ಯಾವುದೇ ಕಾರಣಕ್ಕೂ ಎಲೆಕ್ಟ್ರಾನಿಕ್ ವಸ್ತುಗಳನ್ನ ಅಭ್ಯರ್ಥಿಗಳು ಕೊಠಡಿಗೆ ತರುವಂತಿಲ್ಲ, ಒಂದು ಗಂಟೆಯ ಒಳಗೆ ಅಭ್ಯರ್ಥಿಗಳು ಕೇಂದ್ರಗಳಿಗೆ ಬರಬೇಕು, ಅರ್ಧ ಗಂಟೆಗೆ ಮುಂಚಿತವಾಗಿ ಕೊಠಡಿಗೆ ಬರಬೇಕು, ಒಂದು ರೂಮ್ ನಲ್ಲಿ 20 ಜನರು ಮಾತ್ರ ಇರ್ತಾರೆ ಎಂದು ಸಚಿವ ನಾಗೇಶ್​ ತಿಳಿಸಿದ್ದಾರೆ.

ಅಭ್ಯರ್ಥಿಗಳು ವಾಚ್​ ಕಟ್ಟೋ ಆಗಿಲ್ಲ: ಡಿಜಿಟಲ್ ತಂತ್ರಜ್ಞಾನದ ವಸ್ತುಗಳು ವಾಚ್ ಸೇರಿದಂತೆ ಯಾವುದಕ್ಕೂ ಪರೀಕ್ಷಾ ಕೇಂದ್ರದೊಳಗೆ ಅವಕಾಶ ನೀಡದಿರಲು ಚಿಂತನೆ ನಡೆಸುತ್ತಿದ್ದೇವೆ. ಸಿಸಿಟಿವಿ ಭದ್ರತೆ ಸೇರಿದಂತೆ ನಾನಾ ಟಫ್ ರೂಲ್ಸ್ ಅಳವಡಿಸಿಕೊಳ್ಳಲು ಮುಂದಾಗಿದ್ದೇವೆ. ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಕಠಿಣ ರೂಲ್ಸ್ ಜಾರಿ ಮಾಡಲು ಶಿಕ್ಷಣ ಇಲಾಖೆ ಚರ್ಚೆಗೆ ಮುಂದಾಗಿದೆ. ನೀಟ್ ಮಾದರಿಯಲ್ಲಿ ಪರೀಕ್ಷೆ ನಡೆಸಲು ಸಹ ಯೋಚಿಸುತ್ತಿದೆ ಎಂದು ಹೇಳಿದ್ದಾರೆ.

Share This Article
Leave a comment