May 21, 2022

Newsnap Kannada

The World at your finger tips!

b c nagesh

ಮೇ 2ನೇ ವಾರದಲ್ಲಿ SSLC Results : ಜೂನ್ ಅಂತ್ಯಕ್ಕೆ ಪೂರಕ ಪರೀಕ್ಷೆ – ಶಿಕ್ಷಣ ಸಚಿವ ನಾಗೇಶ್

Spread the love

ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯವಾಗಿದೆ ಮೇ 2ನೇ ವಾರದಲ್ಲಿ SSLC ಪರೀಕ್ಷಾ ಫಲಿತಾಂಶ ಪ್ರಕಟಿಸಿ , ಜೂನ್ ಅಂತ್ಯಕ್ಕೆ ಮತ್ತೆ ಪೂರಕ ಪರೀಕ್ಷೆ ನಡೆಸಲು ಸಿದ್ದತೆ ಮಾಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿರುವ ಸಚಿವರು, ಆಲಮಟ್ಟಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾ. 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದು, ಮುಕ್ತಾಯವಾಗಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದರು.

‘ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ. ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ’ ಎಂದು ಸಚಿವರು ಮಾಹಿತಿ ನೀಡಿದರು.

‘ನಾಳೆಯಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ( SSLC Exam Results ) ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ’ ಎಂದು ಸಚಿವರು ಹೇಳಿದರು

‘ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಲಕ್ಷಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ’ ಎಂದರು.

error: Content is protected !!