ಮೇ. 8 ರಂದು ‘SSLC’ ಫಲಿತಾಂಶ ಪ್ರಕಟ

Team Newsnap
1 Min Read

SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.

ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ (SSLC Result) ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆ ಮೇ 8 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

ಮಾರ್ಚ್ 31 ರಿಂದ ಆರಂಭವಾಗಿದ್ದ ಎಸ್‌ಎಸ್ ಎಲ್ ಸಿ ಪರೀಕ್ಷೆಗಳು ಏಪ್ರಿಲ್ 15 ಕ್ಕೆ ಮುಕ್ತಾಯಗೊಂಡಿದ್ದವು. ಎಸ್‌ಎಸ್ ಎಲ್ ಸಿ ಪರೀಕ್ಷೆಯನ್ನು 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, ಅಂದಾಜು 45 ಲಕ್ಷ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗಿದೆ.

ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

  • ಅಧಿಕೃತ ವೆಬ್ಸೈಟ್-karresults.nic.in ಗೆ ಹೋಗಿ,
  • ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ದರೆ ಹೊಸ login ಪುಟ ತೆರೆಯುತ್ತದೆ,
  • ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು (Register Number) ನಮೂದಿಸಿ , ವಿವರಗಳನ್ನು ಸಲ್ಲಿಸಿದರೆ ಫಲಿತಾಂಶ ವೀಕ್ಷಿಸಬಹುದು.
Share This Article
Leave a comment