July 6, 2022

Newsnap Kannada

The World at your finger tips!

teacher, learning, school

SSLC results will be at 12:30

SSLC ಪರೀಕ್ಷೆ ಫಲಿತಾಂಶ – ನಾಳೆ ಮಧ್ಯಾಹ್ನ 12.30ಕ್ಕೆ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ

Spread the love

ಮೇ.19ರಂದು ಮಧ್ಯಾಹ್ನ 12.30ಕ್ಕೆ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ SSLC ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ಇದನ್ನು ಓದಿ – ದೇವೇಗೌಡರ 89ನೇ ಹುಟ್ಟು ಹಬ್ಬಕ್ಕೆ ಪ್ರಧಾನಿ ಮೋದಿ ಶುಭಾಶಯ

ಮಾರ್ಚ್ 28 – ಏಪ್ರಿಲ್ 11ರವರೆಗೆ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು. ನಾಳೆ ಮಧ್ಯಾಹ್ನ 12.30ಕ್ಕೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ಘೋಷಿಸಿದ್ದಾರೆ. ಈ ಬಳಿಕ ಮಧ್ಯಾಹ್ನ 1 ಗಂಟೆ ನಂತ್ರ ವಿದ್ಯಾರ್ಥಿಗಳು, ಎಸ್ ಎಸ್ ಎಲ್ ಸಿ ಬೋರ್ಡ್ ನ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೇ ನಾಳೆ‌ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.

ಇನ್ನೂ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಇದನ್ನು ಓದಿ – ಬೆಂಗಳೂರಲ್ಲಿ ಭಯಂಕರ ಮಳೆ; ನದಿಯಂತಾದ ರಸ್ತೆಗಳು – ಸಾಕಷ್ಟು ಅವಾಂತರ , ಅನಾಹುತ

SSLC ಫಲಿತಾಂಶ 2022 ಅನ್ನು ಹೇಗೆ ಪರಿಶೀಲಿಸುವುದು?

  • ಅಧಿಕೃತ ವೆಬ್‌ಸೈಟ್‌ಗೆ ಹೋಗಿ: karresults.nic.in 2022 SSLC ಫಲಿತಾಂಶ.
  • ಮುಖಪುಟದಲ್ಲಿ ‘ಕರ್ನಾಟಕ SSLC ಫಲಿತಾಂಶ 2022.’ ಲಿಂಕ್ ಅನ್ನು ಕ್ಲಿಕ್ ಮಾಡಿ.
  • KSEEB SSLC ಫಲಿತಾಂಶ 2022 ಲಾಗಿನ್ ವಿಂಡೋದಲ್ಲಿ, ನೋಂದಣಿ ಸಂಖ್ಯೆ (registration number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ಕರ್ನಾಟಕ 10 ನೇ ಫಲಿತಾಂಶ 2022 ಪರದೆಯ ಮೇಲೆ ಕಾಣಿಸುತ್ತದೆ.
error: Content is protected !!