ರಾಜ್ಯದಲ್ಲಿ ಕಳೆದ ತಿಂಗಳು ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗುವುದಿಲ್ಲ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಸ್ಪಷ್ಟಪಡಿಸಿದೆ.
ಫಲಿತಾಂಶ ಪ್ರಕಟಿಸುವ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮಂಡಳಿ ನಿರ್ದೇಶಕಿ ವಿ. ಸುಮಂಗಲ ಹೇಳಿದ್ದಾರೆ.
ಈ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂಬ ಸುದ್ದಿ ಬೆಳಗ್ಗೆಯಿಂದಲೇ ವ್ಯಾಪಕವಾಗಿ ಹರಡಿತ್ತು. ಫಲಿತಾಂಶದ ಬಗ್ಗೆ ಮುಂದೆ ಅಗತ್ಯ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಳೆದ ತಿಂಗಳ ೧೯ ಮತ್ತು ೨೨ ರಂದು ಎಸ್‌ಎಸ್‌ಎಲ್‌ಸಿಪರೀಕ್ಷೆ ನಡೆದಿತ್ತು. ಕೊರೊನಾದ ಪರಿಣಾಮ ಪರೀಕ್ಷೆಯ ಅವಧಿಯನ್ನು ಎರಡು ದಿನಕ್ಕೆ ಸೀಮಿತಗೊಳಿಸಲಾಗಿತ್ತು. ಅಂದಿನ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರು ಫಲಿತಾಂಶವನ್ನು ಆ. ೧೦ರೊಳಗೆ ಪ್ರಕಟಿಸಲಾಗುವುದೆಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ