ಬೆಂಗಳೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ: 02-12-2024 ರಂದು ಪ್ರಕಟಿಸಲಾಗಿದೆ.
ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲಾ/ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಮಂಡಲಿಯಿಂದ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ: 02-12-2024 ರಿಂದ 16-12-2024 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಪ್ರಕ್ರಿಯೆ:
- ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ [email protected] ಗೆ ಕಳುಹಿಸಬಹುದು.
- ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು – 560 003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸಬೇಕು.
ಇದನ್ನು ಓದಿ – ತುಮಕೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ: ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ
ನಿಗದಿತ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.
More Stories
ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ