April 9, 2025

Newsnap Kannada

The World at your finger tips!

delhi stampede

ದೆಹಲಿ ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ: 18 ಭಕ್ತರ ಸಾವು, 20ಕ್ಕೂ ಹೆಚ್ಚು ಮಂದಿ ಗಾಯ

Spread the love

ನವದೆಹಲಿ: ಶನಿವಾರ ರಾತ್ರಿ ದೆಹಲಿ ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ, ಕುಂಭಮೇಳಕ್ಕೆ ತೆರಳುತ್ತಿದ್ದ 18 ಮಂದಿ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಈ ದುರಂತದಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

ಕುಂಭಮೇಳಕ್ಕೆ ತೆರಳಲು ಭಕ್ತರಿಂದ ದೆಹಲಿ ರೈಲು ನಿಲ್ದಾಣ ತೀವ್ರವಾಗಿ ಜನಸಂದಣಿಗೊಂಡಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದರು. ಆದರೆ, ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲುಗಳು ತಡವಾಗಿ ಬಂದ ಕಾರಣ, ನಿಲ್ದಾಣದಲ್ಲಿ ಜನರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿತು.

ಈ ನಡುವೆ ಪ್ಲಾಟ್‌ಫಾರ್ಮ್ 14 ಮತ್ತು 15ರಲ್ಲಿ ಪ್ರಯಾಗ್‌ರಾಜ್‌ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದಾಗ, ಸಾವಿರಾರು ಭಕ್ತರು ಏಕಾಏಕಿ ರೈಲಿಗೆ ಏರುವ ಪ್ರಯತ್ನದಲ್ಲಿ ತಡೆಹಿಡಿಯಲಾಗದ ಅವ್ಯವಸ್ಥೆ ಉಂಟಾಯಿತು. ಪರಿಣಾಮ ರೈಲಿನ ಒಳಗೂ ಹೊರಗೂ ಭೀಕರ ಕಾಲ್ತುಳಿತ ಸಂಭವಿಸಿತು. ಈ ದುರಂತದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನು ಓದಿ –ಕಾಲೆಳೆಯುವವರು ಇರಲಿ

ಘಟನೆಯ ನಂತರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆಗೆ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!