January 11, 2025

Newsnap Kannada

The World at your finger tips!

school , learning , teaching

ಜ 1 ರಿಂದ ಶಾಲೆಗಳ ಆರಂಭ : ಸಿದ್ದತೆಗಳು ಹೇಗಿರುತ್ತವೆ?

Spread the love

ಪೂರ್ವ ನಿರ್ಧಾರದಂತೆ ಜ. 1 ರಿಂದ ಶಾಲೆ ಆರಂಭದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲಾ ಆರಂಭಕ್ಕೆ ಸಿದ್ದತೆಗಳು ಹೀಗಿವೆ:

  • ಶಾಲೆ ಆರಂಭಕ್ಕೆ 3 ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ಕಡ್ಡಾಯವಾಗಿರುತ್ತದೆ.
  • 10 ನೇ ತರಗತಿಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ
  • ವಾರದಲ್ಲಿ 6 ದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 30 ರವರೆಗೆ ತಲಾ 45 ನಿಮಿಷಗಳ ಮೂರು ಪಿರಿಯಡ್ ಗಳಲ್ಲಿ ಬೋಧನೆ ಮಾಡಲಾಗುತ್ತದೆ.
  • ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ ತಂಡಗಳನ್ನು ರಚಿಸಿ ಪಾಠ ಮಾಡಬೇಕು
  • ವಿದ್ಯಾಗಮ ಯೋಜನೆಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ.
  • ಪ್ರೌಢಶಾಲೆಗಳಲ್ಲಿ 8, 9ನೇ ತರಗತಿಗಳಿಗೆ ವಾರದ ಐದು ದಿನ ಮಧ್ಯಾಹ್ನ 2 ಗಂಟೆಯಿಂದ 4.30 ರವರೆಗೆ ಮೂರು ತರಗತಿಗಳು ನಡೆಯಲಿವೆ.
  • ಪ್ರಾಥಮಿಕ ಶಾಲೆಯಲ್ಲಿ 6 ರಿಂದ 8ನೇ ತರಗತಿ ಮಕ್ಕಳಿಗೆ ವಾರಕ್ಕೆ 6 ದಿನ ಬೆಳಗ್ಗೆ 10 ಗಂಟೆಯಿಂದ 12.30 ರವರೆಗೆ 3 ತರಗತಿಗಳು ನಡೆಯಲಿವೆ.
  • ವಿದ್ಯಾರ್ಥಿಗಳು ಹೆಚ್ಚಾದಲ್ಲಿ 15 -20 ಮಕ್ಕಳ ತಂಡ ರಚಿಸಿ ವಿದ್ಯಾಗಮ ನಡೆಸಲು ಸೂಚನೆ ನೀಡಲಾಗಿದೆ.
Copyright © All rights reserved Newsnap | Newsever by AF themes.
error: Content is protected !!