ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಜಗ್ಗೇಶ್ ಮತ್ತು ಲೆಹರ್ ಸಿಂಗ್ ನಾಮಪತ್ರಗಳನ್ನು ಸಲ್ಲಿಸಿದರು. ವಿಧಾನಸೌಧದಲ್ಲಿ ಜಗ್ಗೇಶ್ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಜೆ. ಸಿ. ಮಾಧುಸ್ವಾಮಿ ಜೊತೆ ನಾಮಪತ್ರ ಸಲ್ಲಿಸಿದರು. ಜಗ್ಗೇಶ್ ರಾಜ್ಯಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿಯ ಎರಡನೇ ಅಭ್ಯರ್ಥಿ.
ಇದನ್ನು ಓದಿ –ಬಿಜೆಪಿ ಅಭ್ಯರ್ಥಿ ರವಿಶಂಕರ್ ಗೆ ಈ ಬಾರಿ ಬಾರೀ ಅಂತರದ ಗೆಲುವು ನಿಶ್ಚಿತ -ಸದಾನಂದ ಗೌಡ ವಿಶ್ವಾಸ
ಬಿಜೆಪಿಯ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಸಹ ನಳಿನ್ ಕುಮಾರ್ ಕಟೀಲ್ ಮತ್ತು ಕಂದಾಯ ಸಚಿವ ಆರ್. ಅಶೋಕ ಜೊತೆ ನಾಮಪತ್ರ ಸಲ್ಲಿಕೆ ಮಾಡಿದರು.
ರಾಜ್ಯದ ಜನರು ಮೆಚ್ಚುವ ಕೆಲಸ ಮಾಡುವೆ
ಇಂದು ಬಿಜೆಪಿ ಅಭ್ಯರ್ಥಿಯಾಗಿ ನಟ ಜಗ್ಗೇಶ್ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಅದಕ್ಕೂ ಮುನ್ನಾ ಗುರು ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು ನನಗೆ ಬೇಡುವುದಕ್ಕಿಂತಲೇ, ಎಲ್ಲವನ್ನು ಸ್ವಾಮಿ ನೀಡಿದ್ದಾನೆ ಎಂದರು.
ಮಲ್ಲೇಶ್ವರಂನಲ್ಲಿ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿ ಜಗ್ಗೇಶ್ ನಾನು ಯಾವಾಗಲೂ ಈ ಜಾಗಕ್ಕೆ ಬರುತ್ತೇನೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುನ್ನಾ, ಇಲ್ಲಿಗೆ ಬಂದಿದ್ದೇನೆ ಎಂದರು.ನಾನು ರಾಘವೇಂದ್ರ ಸ್ವಾಮಿ ಬಳಿಯಲ್ಲಿ ಏನೂ ಬೇಡಿಲ್ಲ. ಬೇಡದೇ ಎಲ್ಲಾ ಕೊಟ್ಟಿದ್ದಾನೆ. ಸ್ವಾಮಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ, ಜನರು ಮೆಚ್ಚುವಂತೆ ಕೆಲಸ ಮಾಡುವೆ ಎಂದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ