ರಾಜ್ಯ ಬಜೆಟ್ ಮಂಡಿಸಿದ ಸಿ ಎಂ ಸಿದ್ದು : ಆದಾಯಕ್ಕಿಂತ ಖರ್ಚು ಹೆಚ್ಚು

Team Newsnap
1 Min Read
State budget presented by CM Siddu: Expenditure is more than income ರಾಜ್ಯ ಬಜೆಟ್ ಮಂಡಿಸಿದ ಸಿ ಎಂ ಸಿದ್ದು : ಆದಾಯಕ್ಕಿಂತ ಖರ್ಚು#Budget

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 14 ನೇ ಸಂಪೂರ್ಣ ಬಜೆಟ್ ನಲ್ಲಿ ಒಂದು ವರ್ಷ ಖರ್ಚು ವೆಚ್ಚಗಳನ್ನು ವಿವರಿಸಿದ್ದಾರೆ.

2023-24ನೇ ಸಾಲಿನಲ್ಲಿ ರಾಜಸ್ವ ಧನಗಳ ಆದಾಯ 2,38,410 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.

ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವವು ಜಿ.ಎಸ್‍.ಟಿ. ಪರಿಹಾರ ಒಳಗೊಂಡಂತೆ 1,75,653 ಕೋಟಿ ರೂ.ಗಳಾಗುತ್ತದೆಂದು ಅಂದಾಜಿದೆ.

ತೆರಿಗೆಯೇತರ ರಾಜಸ್ವಗಳಿಂದ 12,500 ಕೋಟಿ ರೂ.ಗಳನ್ನು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ.

ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂ.ಗಳನ್ನು ಹಾಗೂ 13,005 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ಸಹಾಯಾನುದಾನ ರೂಪದಲ್ಲಿ ರಾಜ್ಯ ಸರ್ಕಾರವು ನಿರೀಕ್ಷಿಸಿದೆ.

ಈ ರಾಜಸ್ವ ಜಮೆಗಳಿಗೆ ಪೂರಕವಾಗಿ 85,818 ಕೋಟಿ ರೂ.ಗಳ ಒಟ್ಟು ಸಾಲಗಳು, 23 ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳು ಮತ್ತು 228 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ.

2023-24ನೇ ಸಾಲಿನಲ್ಲಿ ಒಟ್ಟು ಜಮೆಗಳು 3,24,478 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು 2,50,933 ಕೋಟಿ ರೂ.ಗಳ ರಾಜಸ್ವ ವೆಚ್ಚ, 54,374 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 22,441 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,27,747 ಕೋಟಿ ರೂಪಾಯಿಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.ಶಾಸಕರು ಎಂಟು ತಿಂಗಳು ಯಾವುದೇ ಅನುದಾನ ಕೇಳಬಾರದು – ಶಾಸಕರಿಗೆ ಸಿ.ಎಂ ಮನವಿ

ದೇಶದ ದೊಡ್ಡ ರಾಜ್ಯಗಳಲ್ಲಿ ನಮ್ಮ ರಾಜ್ಯವು ಜಿ.ಎಸ್‍.ಟಿ ತೆರಿಗೆ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 21ರಷ್ಟು ಅತ್ಯಧಿಕ ಬೆಳವಣಿಗೆ ದರವನ್ನು ಸಾಧಿಸಿದೆ. ಪ್ರಸ್ತುತ ಸಾಲಿನ ಮೊದಲನೇ ತ್ರೈಮಾಸಿಕದಲ್ಲಿ ಕೆ.ಜಿ.ಎಸ್‍.ಟಿ ರಾಜಸ್ವ ಸಂಗ್ರಹವು 18,962 ಕೋಟಿ ರೂ.ಗಳಾಗಿರುತ್ತದೆ. ಪರಿಣಾಮಕಾರಿ ತೆರಿಗೆ ಆಡಳಿತಕ್ಕಾಗಿ ಹಾಗೂ ವಾಣಿಜ್ಯೋದ್ಯಮಗಳಿಗೆ ಉತ್ತಮ ಸಂಪರ್ಕವನ್ನು ನೀಡಲು, ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನಾಲ್ಕು ಹೊಸ ವಿಭಾಗಗಳನ್ನು ಶೀಘ್ರದಲ್ಲಿ ಕಾರ್ಯೋನ್ಮುಖಗೊಳಿಸಲಾಗುವುದು. ಅತ್ಯಧಿಕ ತೆರಿಗೆ ಪಾವತಿದಾರರಿಗಾಗಿ ಒಂದು ಪ್ರತ್ಯೇಕ ವಿಭಾಗವನ್ನು ಬೆಂಗಳೂರು ನಗರದಲ್ಲಿ ಸ್ಥಾಪಿಸಲಾಗುವುದು.

Share This Article
Leave a comment