ರಾಜ್ಯ ಬಜೆಟ್ ಅಧಿವೇಶನ ಫೆ.12 ರಿಂದ 23 ರವರೆಗೆ

Team Newsnap
1 Min Read

ಬೆಂಗಳೂರು : 12-02-2024 ರಿಂದ 23-02-2024 ರವರೆಗೆ ವಿಧಾನಸಭೆ ಅಧಿವೇಶನ ನಡೆಯುವ ಹಿನ್ನೆಲೆ ,ಪ್ರತಿದಿನ ಬೆಳಿಗ್ಗೆ 06-00 ಗಂಟೆಯಿಂದ ಮಧ್ಯರಾತ್ರಿ 12-00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಇದನ್ನು ಓದಿ –6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

ಆದೇಶಗಳು ಈ ಕೆಳಗಿನಂತಿವೆ :

  1. 5 ಅಥವಾ ಅದಕ್ಕಿಂತ ಹೆಚ್ಚು ಜನರು ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
  2. ಸಭೆ ಮತ್ತು ಮೆರವಣಿಗೆ ಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
  3. , ಕತ್ತಿಗಳು, ಈಟಿಗಳು, ಶಸ್ತ್ರಗಳನ್ನು, ದೊಣ್ಣೆಗಳನ್ನು , ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
  4. ಸ್ಪೋಟಕ ವಸ್ತುಗಳನ್ನು ಸಿಡಿಸುವುದು ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.
  5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದು ,5. ಸಂಗೀತ ನುಡಿಸುವುದು. ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧ ಮಾಡಲಾಗಿದೆ.

Share This Article
Leave a comment