SC ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಹೆಚ್ಚಿಸಲು ಮತ್ತು ST ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ.
ಶುಕ್ರವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ ಕೂಡ ಎಲ್ಲಾ ನಾಯಕರುಗಳು ಮೀಸಲಾತಿ ಹೆಚ್ಚಳದ ಪರ ಒಗ್ಗಟ್ಟಿನಿಂದ ಸರ್ಕಾರಕ್ಕೆ ಮನವಿ ಮಾಡಿದ್ದವು. ಕೆಆರ್ ಪೇಟೆಯಲ್ಲಿ ಅ.13ರಿಂದ ಮಹಾಕುಂಭಮೇಳ: ಲೋಗೋ ಬಿಡುಗಡೆ ಮಾಡಿದ ಬೊಮ್ಮಾಯಿ
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು, ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಸಾಧಕ- ಬಾಧಕ ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಅಂತಿಮವಾದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ
ಈ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಳಿಗೆ ಮಾಹಿತಿ ನೀಡಿದ ಕಾನೂನ ಸಚಿವ ಮಾಧುಸ್ವಾಮಿ, ಎಸ್ ಸಿ, ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸರ್ಕಾರ ಕೂಡಲೇ ಆದೇಶ ಮೂಲಕ ಜಾರಿ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ