SC,ST ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

Team Newsnap
1 Min Read

SC,ST ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ

SC ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಹೆಚ್ಚಿಸಲು ಮತ್ತು ST ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ.

ಶುಕ್ರವಾರ ನಡೆದಿದ್ದ ಸಭೆ:

ಶುಕ್ರವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ ಕೂಡ ಎಲ್ಲಾ ನಾಯಕರುಗಳು ಮೀಸಲಾತಿ ಹೆಚ್ಚಳದ ಪರ ಒಗ್ಗಟ್ಟಿನಿಂದ ಸರ್ಕಾರಕ್ಕೆ ಮನವಿ ಮಾಡಿದ್ದವು. ಕೆಆರ್ ಪೇಟೆಯಲ್ಲಿ ಅ.13ರಿಂದ ಮಹಾಕುಂಭಮೇಳ: ಲೋಗೋ ಬಿಡುಗಡೆ ಮಾಡಿದ ಬೊಮ್ಮಾಯಿ

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು, ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಸಾಧಕ- ಬಾಧಕ ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಅಂತಿಮವಾದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ

ಈ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಳಿಗೆ ಮಾಹಿತಿ ನೀಡಿದ ಕಾನೂನ ಸಚಿವ ಮಾಧುಸ್ವಾಮಿ, ಎಸ್ ಸಿ, ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸರ್ಕಾರ ಕೂಡಲೇ ಆದೇಶ ಮೂಲಕ ಜಾರಿ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

Share This Article
Leave a comment