ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ

Team Newsnap
1 Min Read

ಜನವರಿ 17 ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ.ಜೈಲು ಸೇರಿದ ‘ಸ್ಯಾಂಟ್ರೋ’

ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿ ಮೂರು ಪ್ರತ್ಯೇಕ ಪಟ್ಟಿಯನ್ನು ಸಿದ್ಧಪಡಿಸಿಕೊಂಡ ಸಿಎಂ ಬೊಮ್ಮಾಯಿ, ವರಿಷ್ಠರ ಬಳಿ ಮೂರು ಪಟ್ಟಿಗಳ ಬಗ್ಗೆ ಮಾತಕತೆ ನಡೆಸಿದ್ದಾರೆ ಜನವರಿ 17 ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸೋಮವಾರ ಮತ್ತು ಮಂಗಳವಾರ ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ ಆ ಸಭೆಯ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ.

ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಸದ್ಯ ಖಾಲಿಯಿರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ಲೆಕ್ಕಚಾರ ಹಾಕಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹೊಸಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರ ಸಿಎಂ ಸಿದ್ದಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

Share This Article
Leave a comment