December 23, 2024

Newsnap Kannada

The World at your finger tips!

meke krage

10 ದಿನದ ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆಗೆ ಅಧಿಕೃತ ಚಾಲನೆ ನೀಡಿದ ಖರ್ಗೆ

Spread the love

ಕೊವೀಡ್ ಕಠಿಣ ಕ್ರಮದ ನಡುವೆಯೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ನ ಮಹತ್ವದ 10 ದಿನಗಳ ಪಾದಯಾತ್ರೆಗೆ ಭಾನುವಾರ ಚಾಲನೆ ಸಿಕ್ಕಿದೆ.

ಕನಕಪುರ ತಾಲೂಕಿನ ಸಂಗಮ ಕ್ಷೇತ್ರದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ.ಇದಕ್ಕೂ ಮುನ್ನ ಸಭಾ ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಡೋಲು ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.

ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಕಾಂಗ್ರೆಸ್​ ನಾಯಕರು, ಸಾಧು ಕೋಕಿಲ, ದುನಿಯ ವಿಜಯ್, ಹಲವು ಮಠಾಧೀಶರು ಭಾಗಿಯಾಗಿದ್ದರು.

ಕೊರೊನಾ ಟಫ್​ ರೂಲ್ಸ್ ನಡುವೆಯೂ ಹಸ್ತ ಪಡೆ ಪಾದಯಾತ್ರೆ ಮಾಡಿಯೇ ತೀರುತ್ತೇವೆ ಅಂತ ಪಣ ತೊಟ್ಟಿದೆ. ಜನವರಿ 19ರವರೆಗೆ ನಡೆಯಲಿರೋ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್​​ಗೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

ಮತ್ತೊಂದು ಕಡೆ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದೆ, ಯಾವುದೇ ರೀತಿಯ ಪಾದಯಾತ್ರೆ, ಪ್ರತಿಭಟನೆಗೆ ಅವಕಾಶವಿಲ್ಲ ಅಂತ ಸರ್ಕಾರ ಕಟ್ಟುನಿಟ್ಟಾಗಿ ಆದೇಶ ಹೊರಡಿಸಿದೆ. ಇದರ ನಡುವೆಯೂ ಕಾಂಗ್ರೆಸ್ ಪಾದಯಾತ್ರೆಗೆ ರಾಮನಗರದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. 2 ಸಾವಿರ ಪೋಲಿಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!