ಕಾಂಗ್ರೆಸ್ ನ ರಾಜ್ಯ ನಾಯಕರಿಗೆ ಜಾತ್ಯಾತೀತ ಶಕ್ತಿಗಳು ಒಗ್ಗೂಡಿಸುವ ಅಭಿಲಾಷೆಯೇ ಇಲ್ಲ. ಹೀಗಾಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಗೆ ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಇಷ್ಟವೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.
ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೆವು. ನಮ್ಮ ವಿರುದ್ಧ ಕುತಂತ್ರ ಮಾಡಿದರೂ ಕೈಜೋಡಿಸಿದೆವು. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ನಮಗೆ ಗೌರವ ಇದೆ. ದೇವೇಗೌಡರು ಹಾಗೂ ಖರ್ಗೆ ಮಾತ್ರ ಚರ್ಚಿಸಿದ್ದಾರೆ. ಉಳಿದ ಯಾವ ನಾಯಕರೂ ನಮ್ಮ ಬಳಿ ಮಾತನಾಡುತ್ತಿಲ್ಲ ಎಂದು ಹೇಳಿದರು.
ಈ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಂ ಎಂದು ನಿರೂಪಿಸುವ ಉದ್ದೇಶ ಹೊಂದಿದ್ದಾರೆ. ನಮ್ಮ ಪಕ್ಷದ ಶಕ್ತಿಯನ್ನು ಕುಂದಿಸುವ ಕೆಲಸ ಮಾಡುತ್ತಿದ್ದಾರೆ. ಇವರಿಬ್ಬರಿಗೂ ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಇಷ್ಟವೇ ಇಲ್ಲ. ಇದನ್ನ ಮೈಸೂರು ಮೇಯರ್ ಚುನಾವಣೆ ವೇಳೆಯೇ ನೋಡಿದ್ದೇವೆ. ಆಗ ರಾಜ್ಯಮಟ್ಟದ ಯಾವ ನಾಯಕರೂ ನಮ್ಮನ್ನು ಸಂಪರ್ಕ ಮಾಡಲೇ ಇಲ್ಲ. ಈಗಲೂ ಅದನ್ನೇ ಮಾಡುತ್ತಿದ್ದಾರೆ. ಹೈಕಮಾಂಡ್ ರಾಜ್ಯ ನಾಯಕರಿಗೆ ಮೈತ್ರಿಗೆ ಸೂಚಿಸಲಿ. ಇಲ್ಲವೇ ಹೈಕಮಾಂಡ್ ನಮಗೆ ಮನವಿ ಮಾಡಲಿ. ಆಗ ಕಲಬುರಗಿ ಮಹಾನಗರ ಪಾಲಿಕೆಗೆ ಬೆಂಬಲ ನೀಡುವ ಬಗ್ಗೆ ಪರಿಶೀಲಿಸುತ್ತೇವೆ ಎಂದು ಹೆಚ್ಡಿಕೆ ಹೇಳಿದರು.
ಬಿಜೆಪಿ ಪಕ್ಷ ನಮ್ಮ ಜೊತೆ ಮಾತುಕತೆ ಮಾಡಿದ್ದಾರೆ. ಬಿಜೆಪಿ ನಾಯಕರೂ ಕೂಡ ಅವಶ್ಯಕತೆ ಇದ್ದಾಗ ಬಳಸಿಕೊಂಡು ನಂತರ ನಮ್ಮ ವಿರುದ್ಧ ಮಾತನಾಡುತ್ತಾರೆ. ಈ ಕಾರಣಕ್ಕಾಗಿ ನಾವು ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ