ರಾಜ್ಯ DGP ಪ್ರವೀಣ್ ಸೂದ್ ಸಿಬಿಐ ನಿರ್ದೇಶಕ ಹುದ್ದೆಗೆ ನೇಮಕ ?

Team Newsnap
1 Min Read
State DGP Praveen Sood appointed as CBI Director? ರಾಜ್ಯ DGP ಪ್ರವೀಣ್ ಸೂದ್ ಸಿಬಿಐ ನಿರ್ದೇಶಕ ಹುದ್ದೆಗೆ ನೇಮಕ ?

ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ನೇಮಕವಾಗುವ ಸಾಧ್ಯತೆ ಇದೆ.

ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಅಧಿಕಾರಾವಧಿ ಮೇ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದೆ.

ಮುಂದಿನ ನಿರ್ದೇಶಕರ ಆಯ್ಕೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದೆ.

ಸಭೆಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಅವರನ್ನು ಸಿಬಿಐ ಮುಂದಿನ ನಿರ್ದೇಶಕರ ಸ್ಥಾನಕ್ಕೆ ನೇಮಕ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗಿದೆ.ರಾಜಕೀಯಕ್ಕೆ ಗುಡ್ ಬೈ ಹೇಳಿದ ಎಂ.ಪಿ. ರೇಣುಕಾಚಾರ್ಯ

ಬಹುತೇಕ ಪ್ರವೀಣ್ ಸೂದ್ ಅವರ ಹೆಸರನ್ನೇ ಅಂತಿಮಗೊಳಿಸುವ ಸಾಧ್ಯತೆ ಇದೆ. 1986ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದೆ, ಅವರ ಸೇವಾ ಅವಧಿ ಇನ್ನೂ ಒಂದು ವರ್ಷಬಾಕಿ ಇದೆ.

Share This Article
Leave a comment