ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್

Team Newsnap
1 Min Read

ಸರ್ಕಾರಿ ನೌಕರರ ಬೇಡಿಕೆ ಕುರಿತಂತೆ ಸರ್ಕಾರ ಎರಡು ಆದೇಶವನ್ನು ಹೊರಡಿಸಿದೆ. ಶೇ.17 ರಷ್ಟು ವೇತನ ಹೆಚ್ಚಳ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ -ಎನ್ ಪಿಎಸ್ ಬಗ್ಗೆ ಪರಿಶೀಲನೆ ಸಂಬಂಧ ಆದೇಶ ಹೊರಡಿಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್. ಷಡಕ್ಷರಿ, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. 15 ಲಕ್ಷ ನಿವೃತ್ತ ನೌಕರರಿಗೂ ಅನುಕೂಲಗಳು ಆಗಲಿವೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಬೇಡಿಕೆ ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ ಎಂದರು.

ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಆದೇಶವನ್ನು ಒಪ್ಪಿದ್ದೇವೆ. ಹಾಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ನೌಕರರ ಮುಷ್ಕರ ವಾಪಸ್ ಪಡೆಯುವುದಾಗಿ ಘೋಷಿಸಿದರು.

ನಾಳೆಯಿಂದ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದರು.ಇದನ್ನು ಓದಿ –ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚನೆ – ಸರ್ಕಾರದ ಆದೇಶ

Share This Article
Leave a comment