ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿದ್ದು ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ (Congress Government) ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದಿಂದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದು ,ರಾಜ್ಯ ಸರ್ಕಾರವೇ . ಈ ಘಟನೆಗೆ ನೇರವಾದ ಹೊಣೆ ಎಂದು ದೂರಿದ್ದಾರೆ.
ವಿದೇಶಕ್ಕೆ ಹಾರಲು ಕೇಂದ್ರ ಸರ್ಕಾರ ಸಹಕಾರ ಇದೆ ಎಂಬ ರಾಜ್ಯ ಕಾಂಗ್ರೆಸ್ ಸರ್ಕಾರದ ಆರೋಪದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮೋದಿ ತಿರುಗೇಟು ನೀಡಿದ್ದಾರೆ.
ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಸ್ಪಷ್ಟ ದೃಷ್ಟಿಕೋನವನ್ನು ಹೊಂದಿದ್ದೇವೆ. ಈ ರೀತಿಯ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಪ್ರಜ್ವಲ್ ದೇಶದಿಂದ ಹೊರಹೋಗಲು ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ.ಇದು ಕಾನೂನು ಸುವವ್ಯವಸ್ಥೆಗೆ ಸಂಬಂಧಿಸಿದ ವಿಷಯವಾದ ಕಾರಣ ಕ್ರಮ ವಹಿಸುವ ಜವಾಬ್ಧಾರಿಯು ಸರ್ಕಾರದ ಮೇಲಿದೆ ಎಂದು ಹೇಳಿದ್ದಾರೆ.
ವಿಡಿಯೋಗಳು ಜೆಡಿಎಸ್ (JDS) ಪಕ್ಷವು ಕಾಂಗ್ರಸ್ಸಿನ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದ ಅವಧಿಗೆ ಸೇರಿದೆ ಎನ್ನುವುದು ಗೊತ್ತಾಗುತ್ತಿದ್ದು , ಅವರು ಅಧಿಕಾರದಲ್ಲಿದ್ದಾಗ ವಿಡಿಯೋಗಳನ್ನ ಸಂಗ್ರಹಿಸಿದ್ದರು. ಒಕ್ಕಲಿಗರು (Vokkaliga) ಮತದಾನ ಹಕ್ಕನ್ನು ಚಲಾಯಿಸಿದ ನಂತರ ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋಗಳನ್ನ ಬಿಡುಗಡೆ ಮಾಡಿದ್ದಾರೆ.
ದೇಶದಿಂದ ಪ್ರಜ್ವಲ್ ಅವರನ್ನು ಹೊರಗೆ ಕಳುಹಿಸಿದ ಮೇಲೆಯೇ ವಿಡಿಯೋ ರಿಲೀಸ್ ಮಾಡಲಾಗಿದ್ದು ,ಈ ಬೆಳವಣಿಗೆ ಬಹಳ ಅನುಮಾನಾಸ್ಪದ ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಪರಾಧಿಗಳನ್ನ ಬಿಡಬಾರದು ,ಇಂತಹ ವ್ಯಕ್ತಿಗಳ ವಿರುದ್ಧ ತುಸು ಸಹನೆ ಕೂಡ ತೋರಬಾರದು.ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ
ಪ್ರಜ್ವಲ್ ಅವರನ್ನು ವಾಪಸ್ ಕರೆತಂದು ಕಾನೂನಡಿಯ ಎಲ್ಲಾ ಆಯ್ಕೆಗಳನ್ನು ಬಳಕೆ ಮಾಡಿ ಕಠಿಣ ಶಿಕ್ಷೆ ನೀಡಬೇಕು ಎಂದು ಮೋದಿ ಆಗ್ರಹಿಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು