March 13, 2026

Newsnap Kannada

The World at your finger tips!

b b m p

ಬಿಬಿಎಂಪಿಗೆ ಚುನಾವಣೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್

Spread the love

ಬೃಹತ್ ಬೆಂಗಳೂರು ಮಾಹಾ ನಗರ ಪಾಲಿಕೆ ಗೆ ಚುನಾವಣೆ ನಡೆಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.‌

ಮುಂದಿನ 6 ವಾರಗಳಲ್ಲಿ ವಾರ್ಡುಗಳ ಮೀಸಲಾತಿ ನಿಗದಿ ಮಾಡಿ ಫೆಬ್ರವರಿ ಯೊಳಗೆ ಚುನಾವಣೆ ನಡೆಸುವಂತೆ ಚುನಾವಣೆ ಆಯೋಗಕ್ಕೆ ಕೋರ್ಟ್ ನಿರ್ದೇಶನ ನೀಡಿದೆ.

bbmp

ಬಿಬಿಎಂಪಿಯಲ್ಲಿ ವಾರ್ಡಗಳ ಹೆಚ್ಚಳಕ್ಕೆ ಬ್ರೇಕ್ ಹಾಕಿರುವ ಕೋರ್ಟ್ 198 ವಾರ್ಡುಗಳಿಗೆ ಚುನಾವಣೆ ನಡೆಸಿವಂತೆ ಸೂಚನೆ ನೀಡಿದೆ.

ಬಿಬಿಎಂಪಿ ಚುನಾವಣೆ ನಡೆಸಲು ಅಗತ್ಯವಾದ ಹಣಬಕಾಸು ಒದಗಿಸುವಂತೆಯೂ ಸರ್ಕಾರಕ್ಕೆ ಸೂಚಿಸಿದೆ.

ಬೆಂಗಳೂರಿನ ಅಭಿವೃದ್ಧಿ ದೃಷ್ಟಿಯಿಂದ ವಾರ್ಡುಗಳ ಸಂಖ್ಯೆ ಹೆಚ್ಚಿಗೆ ಮಾಡವ ಉದ್ದೇಶ ಹೊಂದಲಾಗಿತ್ತು. ಈಗ ಕೋರ್ಟ್ ಸೂಚಿಸಿರುವ ಸಂಗತಿ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗು ವುದು ಎಂದು ಬಿಡಿಎ ಅಧ್ಯಕ್ಷ ವಿಶ್ವನಾಥ್ ಹೇಳಿದ್ದಾರೆ.

error: Content is protected !!