ವಿಧಾನ ಸಭೆಯ ಉಪ ಸಭಾಪತಿ , ಸವದತ್ತಿ ಕ್ಷೇತ್ರದ ಶಾಸಕ ಆನಂದ್ ಮಾಮನಿ ಕಳೆದ ತಡರಾತ್ರಿ ನಂತರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು, ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ 56 ವರ್ಷದ ಮಾಮನಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.
ಕರ್ನಾಟಕ ವಿಧಾನಸಭೆಯ ಉಪ ಸ್ಪೀಕರ್ ಆಗಿ, ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. 1966ರಲ್ಲಿ ಜನಿಸಿದ ಆನಂದ್, ಬಿ.ಕಾಂ ಪದವಿಧರರು. ರಾಜಕೀಯಕ್ಕೆ ಬರುವ ಮುನ್ನ ಹತ್ತಿ ವ್ಯಾಪಾರಿ ಆಗಿದ್ದರು.
2008ರಲ್ಲಿ ಬಿಜೆಪಿ ಟಿಕೆಟ್ ಪಡೆದು ಸವದತ್ತಿ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಪ್ರವೇಶ ಪಡೆದ್ದರು. ಇದೇ ಅವಧಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ್ದರು. 2013ರಲ್ಲಿ ಎರಡನೇ ಬಾರಿಗೆ ಮತ್ತು 2018ರಲ್ಲಿ ಮೂರನೇ ಬಾರಿ ಶಾಸಕರಾಗಿ ಪುನರಾಯ್ಕೆಯಾದ್ದರು.
2015ರಲ್ಲಿ ಡಿಸಿಸಿ ಬ್ಯಾಂಕ್ ಬೆಳಗಾವಿ ನಿರ್ದೇಶಕರಾಗಿ ನೇಮಕ. ನಂತರ 2020ರಲ್ಲಿ ಕರ್ನಾಟಕ ವಿಧಾನಸಭೆ ಉಪ ಸ್ಪೀಕರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು, ಶಾಸಕ ಆನಂದ್ ಮಾಮನಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದರು. ಬಿಜೆಪಿಗೆ ಇದು ಎರಡನೇ ಶಾಕ್
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ