ಬೆಂಗಳೂರು : ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ರಾಜ್ಯದ ವಿವಿಧ ಭಾಗಗಳಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯದ ಎಲ್ಲ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ ಮಧ್ಯಮ/ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ.
ಫೆ.26 ಮತ್ತು 27 ರಂದು ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳಬಹುದು.
ವಿವಿಧ ಕ್ಷೇತ್ರಗಳಲ್ಲಿ 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.ಮೈಸೂರಿನಲ್ಲಿ ಚಿರತೆಗಳ ಸೆರೆ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‍ಲೈನ್ https://skillconnect.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು.
More Stories
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ