ಮುಂದಿನ ಎರಡು, ಮೂರು ದಿನದೊಳಗೆ ರಾಜ್ಯ ಸಚಿವ ಸಂಪುಟ ಪುನರ್ ರಚನೆ ಕುರಿತಂತೆ ವರಿಷ್ಠರೊಂದಿಗೆ ಚರ್ಚೆ ಮಾಡಿ, ಸಧ್ಯದಲ್ಲೇ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಂಗಳವಾರ ತಿಳಿಸಿದರು.
ಚುನಾವಣಾ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ನಾಳೆ, ನಾಡಿದ್ದು ಪ್ರಧಾನಿ ಮಂತ್ರಿ ಮೋದಿ, ಕೇಂದ್ರ ಸಚಿವ ಅಮಿಶ್ ಶಾ ಹಾಗೂ ನಡ್ಡಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಮಾಲೋಚನೆ ಮಾಡಿ ಅವರುಗಳ ನಿರ್ದೇಶನದಂತೆ ನಡೆದುಕೊಳ್ಳುವುದಾಗಿ ಹೇಳಿದರು.
ಕೆಲವು ಸಚಿವ ಅಕಾಂಕ್ಷಿ ಸಂಪುಟಕ್ಕೆ ಸೇರಿಸಿಕೊಳ್ಳುವುದು ಮತ್ತು ಕೆಲವರನ್ನು ಕೈ ಬಿಡುವುದರ ಬಗ್ಗೆ ತೀರ್ಮಾನ ಮಾಡಿದ್ದೇನೆ. ಯಾರನ್ನು ಕೈ ಬಿಡುವುದು, ಸೇರಿಸಿಕೊಳ್ಳುವುದು ಎಂಬುದನ್ನು ವರಿಷ್ಠರೊಂದಿಗೆ ಚರ್ಚೆ ಮಾಡಲಾಗುವುದು.
ರಾಜ್ಯದ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಜನತೆ ಜಯ ತಂದು ಕೊಟ್ಟಿದ್ದಾರೆ. ಬಸವಕಲ್ಯಾಣ ಸೇರಿದಂತೆ ಬೆಳಗಾವಿ ಸಂಸದ ಕ್ಷೇತ್ರ ಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತವೆ ಎಂದರು.ಬಸವಕಲ್ಯಾಣ ಕ್ಷೇತ್ರದಿಂದ ಬಿ ವೈ ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ. ಆಯಾ ಕ್ಷೇತ್ರದಲ್ಲಿನ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ಮಾಡಿ ನಿರ್ಧಾರ ಮಾಡುವುದಾಗಿ ಹೇಳಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ