November 27, 2024

Newsnap Kannada

The World at your finger tips!

ravikumar

ನಾಳೆಯಿಂದ ಮೇ 4 ರ ವರೆಗೆ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಜಾರಿ: ರಾಜ್ಯ ಸರ್ಕಾರ ನಿರ್ಧಾರ

Spread the love

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ರಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಹಾಗೂ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ.

ಹೊಸ ಮಾರ್ಗಸೂಚಿಯಂತೆ 14 ದಿನಗಳ ವರೆಗೆ ರಾಜ್ಯದಲ್ಲಿ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಏಪ್ರಿಲ್ 21 ರಿಂದ ಮೇ4 ರವರೆಗೆ ಕಠಿಣ ಕ್ರಮ :

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಈ ಕುರಿತಂತೆ ವಿವರ ನೀಡಿ, ಏಪ್ರಿಲ್ 21( ನಾಳೆಯಿಂದ) ಮೇ.4ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾಧ್ಯಂತ ಸೋಮವಾರದಿಂದ ರಾತ್ರಿ 9 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸ ಲಾಗಿದೆ.

  • ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಆದರೆ ಪಾರ್ಸಲ್ ಗೆ ಅವಕಾಶವಿದೆ.
  • ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ.
  • ಇ ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ.
  • ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ.
  • ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ.
  • ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ.
  • ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ನಲ್ಲಿ ತೆರಳೋರು ಟಿಕೆಟ್ ತೋರಿಸಿ ಸಾಗಬೇಕು.
  • ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಭಕ್ತರಿಗೆ ಅವಕಾಶವಿಲ್ಲ.
  • ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ.
  • ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡೋದಕ್ಕೆ ಅವಕಾಶ.‌

Copyright © All rights reserved Newsnap | Newsever by AF themes.
error: Content is protected !!