ರಾಜ್ಯಾದ್ಯಂತ ಮುಷ್ಕರ ವಾಪಸ್ ಪಡೆದುಕೊಂಡ ಗಣಿ ಉದ್ಯಮಿಗಳು

Team Newsnap
1 Min Read
State-wide strike withdrawn by miners ರಾಜ್ಯಾದ್ಯಂತ ಮುಷ್ಕರ ವಾಪಸ್ ಪಡೆದುಕೊಂಡ ಗಣಿ ಉದ್ಯಮಿಗಳು

ಕ್ವಾರಿ ಮತ್ತು ಕ್ರಷರ್ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಹಂತ ಹಂತವಾಗಿ ಬಗೆಹರಿಸುವ ಭರವಸೆ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆಯುವುದಾಗಿ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ ತಿಳಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಗಣಿ ಸಚಿವ ಹಾಲಪ್ಪ ಆಚಾರ್, ಕಂದಾಯ ಸಚಿವ ಆರ್. ಅಶೋಕ್ ಮತ್ತು ಹಿರಿಯ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಸರ್ಕಾರ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಆಶ್ವಾಸನೆ ನೀಡಿರುವುದರಿಂದ ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ಮುಷ್ಕರ ಕೊನೆಗೊಂಡಿದೆ. ಇದರಿಂದಾಗಿ ಮನೆ ನಿರ್ಮಿಸಲು, ಸರ್ಕಾರದ ನಿರ್ಮಾಣ ಕಾಮಗಾರಿಗಳ ಮೇಲೆ ಉಂಟಾಗಿರುವ ಪ್ರತಿಕೂಲ ಪರಿಸ್ಥಿತಿ ಕೊನೆಗೊಂಡಿದೆ.

ವಿಶೇಷವಾಗಿ ಯಲಹಂಕ ವಾಯುನೆಲೆಯಲ್ಲಿ ಜಾಗತಿಕ ವೈಮಾನಿಕ ಪ್ರದರ್ಶನ ಏರ್ ಶೋ ಕಾಮಗಾರಿ ಮೇಲಿನ ಕರಿನೆರೆಳು ನಿವಾರಣೆಯಾಗಿದೆ.ಜಸ್ಟ್ ಫಾರ್ ಫನ್‍ ಗೆ ಬಾಂಬ್ ಬೆದರಿಕೆ ಹಾಕಿದ್ದೆ – ಅಪ್ರಾಪ್ತ ಬಾಲಕ ಹೇಳಿಕೆ

ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸ್ಟೋನ್ ಕ್ರಷರ್ಸ್ & ಕ್ವಾರಿ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಶೆಟ್ಟಿ, ನಮ್ಮ ಬೇಡಿಕೆಗಳನ್ನು ಈಡೇರಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದೆ. ಎರಡು ಕಡೆಗಳಲ್ಲಿ ರಾಜಧನ ಸಂಗ್ರಹ ಮಾಡುವುದಿಲ್ಲ. ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಮಾಲೀಕರು ಮಾತ್ರವೇ ರಾಜಧನ ಸಂಗ್ರಹಿಸುವ ಕುರಿತು ಭರವಸೆ ನೀಡಿದ್ದಾರೆ. ಹೀಗಾಗಿ ನಾವು ಮುಷ್ಕರ ಹಿಂಪಡೆಯುತ್ತಿದ್ದೇವೆ.

ನಾಳೆಯಿಂದ ಎಂದಿನಂತೆ ಕ್ರಷರ್ಸ್‍ಗಳು ಕಾರ್ಯನಿರ್ವಹಿಸಲಿದೆ. ಹದಿನೈದು ದಿನಗಳಲ್ಲಿ ಬೇಡಿಕೆಗಳು ಈಡೇರಲಿವೆ ಎಂದರು.

Share This Article
Leave a comment