December 26, 2024

Newsnap Kannada

The World at your finger tips!

salim ugra

ಡಿಕೆಶಿ ವಿರುದ್ದ ಹೇಳಿಕೆ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್‌ ನೋಟಿಸ್‌

Spread the love

ಡಿಕೆ ಶಿವಕುಮಾರ್‌ ವಿರುದ್ಧವೇ ಭ್ರಷ್ಟಾಚಾರದ ಆರೋಪ ಮಾಡಿದ ಮಾಧ್ಯಮ ಸಂಯೋಜಕ ಸಲೀಂ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ಸಿನಿಂದ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಉಗ್ರಪ್ಪಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ.

ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ರೆಹಮಾನ್‌ ಖಾನ್‌ ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿ ಈ ಕ್ರಮವನ್ನು ಪ್ರಕಟಿಸಿದ್ದಾರೆ

ಸಲೀಂ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಅವರ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳವರೆಗೆ ಉಚ್ಚಾಟಿಸಲಾಗಿದೆ.

ಉಗ್ರಪ್ಪಗೆ ನೋಟಿಸ್‌:

ಡಿಕೆ ಶಿವಕುಮಾರ್‌ ಘನತೆ ಗೌರವವಗಳಿಗೆ ಕುಂದುಂಟುವಾಗುವಂತೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅಪಾರ ಹಾನಿ ಉಂಟಾಗುವ ಅಪಾರ ವಿಚಾರಗಳನ್ನು ಮಾತನಾಡಿದ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಈ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನದ ಒಳಗಡೆ ನೀಡಬೇಕು ಎಂದು ನೋಟಿಸ್ ನಲ್ಲಿ ಸೂಚಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!