CM ಬಸವರಾಜ ಬೊಮ್ಮಾಯಿ ಗುರುವಾರ ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರು ಗಳನ್ನು ಬಿಡುಗಡೆ ಮಾಡಿದರು. ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರು ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು.
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಮೇ 31 ರಂದು ಪ್ರಧಾನ ಮಂತ್ರಿಗಳು ರಾಜ್ಯದ 49.30 ಲಕ್ಷ ರೈತರಿಗೆ 1279.86 ಕೋಟಿ ರೂ. ಬಿಡುಗಡೆ ಮಾಡಿದರು.
ಕೃಷಿ ಸಚಿವ ಬಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾಧ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ