ರಾಜ್ಯಾದ್ಯಂತ ಜುಲೈ 28ರಂದು ಆಟೋ ಚಾಲಕರ ಮುಷ್ಕರಕ್ಕೆ ಕರೆ

Team Newsnap
1 Min Read
Statewide call for auto drivers' strike on July 28 ರಾಜ್ಯಾದ್ಯಂತ ಜುಲೈ 28ರಂದು ಆಟೋ ಚಾಲಕರ ಮುಷ್ಕರಕ್ಕೆ ಕರೆ #autodrivers #kannadanews

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಆಟೋ ಚಾಲಕರು ಜುಲೈ.28ರಂದು ರಾಜ್ಯಾದ್ಯಂತ ಆಟೋ ಚಾಲಕರ ಮುಷ್ಕರಕ್ಕೆ ಕರೆ ನೀಡಲಾಗಿದೆ.ಶಕ್ತಿ ಯೋಜನೆಯ ನಂತರ ಆಟೋ, ಟ್ಯಾಕ್ಸಿಗಳಿಗೆ ಬಹುದೊಡ್ಡ ಹೊಡೆತವನ್ನು ನೀಡಿದೆ, ಆಟೋ ಮತ್ತು ಟ್ಯಾಕ್ಸಿಗಳಿಗೆ ಜನರು ಇಲ್ಲದೇ ಚಾಲಕರು, ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. 

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಅವರು, ಶಕ್ತಿ ಯೋಜನೆ ನಂತರ ಆಟೋ ಮತ್ತು ಟ್ಯಾಕ್ಸಿ ಚಾಲಕರು ನಷ್ಟ ಅನುಭವಿಸುವಂತೆ ಆಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಆಟೋ ಚಾಲಕನಿಗೆ ಪ್ರತಿ ತಿಂಗಳು 10 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜುಲೈ.28 ರಂದು 21 ಆಟೋ ಸಂಘಟನೆಗಳು ಹಾಗೂ ಖಾಸಗಿ ಬಸ್ ಒಕ್ಕೂಟ, ಶಾಲಾ ವಾಹನಗಳನ್ನು ಬಂದ್ ಮಾಡಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ, ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದಿಂದ ಅಸಂಘಟಿತ ವಾಣಿಜ್ಯ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಆಟೋ, ಟ್ಯಾಕ್ಸಿ ಚಾಲಕರಿಗೆ 2 ಲಕ್ಷ ಸಾಲ ಸೌಲಭ್ಯ ನೀಡಬೇಕು. ಭಾರತದ ಚಂದ್ರಯಾನ -3 : ನಾಳೆ ಶ್ರೀಹರಿ ಕೋಟಾದಿಂದ ಉಡಾವಣೆ

ಎಲೆಕ್ಟ್ರಿಕ್ ಆಟೋಗಳನ್ನು ರ್ಯಾಪಿಡೋ, ಓಲಾ, ಊಬರ್ ಕಂಪನಿಗೆ ನೋಂದಣಿ ಮಾಡುವುದನ್ನು ನಿಲ್ಲಿಸಬೇಕು ಎಂದರು.

Share This Article
Leave a comment