ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು , ಕರಾವಳಿಯ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ,ಬೆಳಗಾವಿ, ಬೀದರ್, ಕಲಬುರಗಿ , ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಯಂತೆ 22 ಸೆಂ.ಮೀ ಮಳೆಯಾಗಬೇಕು. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ,ಕರಾವಳಿಯಲ್ಲಿ ಆಗಸ್ಟ್ ತಿಂಗಳಲ್ಲಿ 82 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನಲ್ಲಿ 12 ಸೆಂ.ಮೀ ಮಳೆಯಾಗಬೇಕಿದ್ದು ,ಆದರೆ ನೀರಿಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ 18 ಸೆಂ.ಮೀ ಮಳೆಯಾಗಕಿದ್ದು ,ನೀರಿಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ .ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಬೆಂಗಳೂರಿನಲ್ಲಿ ಮಂಗಳವಾರ ಒಂದೇ ದಿನ 4 ಸೆಂ.ಮೀ ಮಳೆಯಾಗಿದ್ದು, ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಸಾರ್ವಜನಿಕರ ಗಮನಕ್ಕೆ: ಈ 8 ಸರ್ಕಾರದ ಕಾರ್ಡ್ಗಳೊಂದಿಗೆ ನೀವು ಮಹತ್ವದ ಸೌಲಭ್ಯಗಳನ್ನು ಪಡೆಯಬಹುದು!