December 19, 2024

Newsnap Kannada

The World at your finger tips!

KSRTC , UPI , Ticket

ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ

Spread the love

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಾ ರಾಜ್ಯದ ಸಾರಿಗೆ ಇಲಾಖೆಯ ನೌಕರರು ಡಿಸೆಂಬರ್ 31 ರಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಈ ನಿರ್ಧಾರದಿಂದಾಗಿ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಸಾರಿಗೆ ನೌಕರರ ಪ್ರಮುಖ ನಾಯಕ ಅನಂತ ಸುಬ್ಬರಾವ್ ಅವರು ಈಗಾಗಲೇ ಡಿಸೆಂಬರ್ 31 ರಿಂದ ಮುಷ್ಕರ ಆರಂಭವಾಗಲಿದೆ ಎಂದು ಘೋಷಿಸಿದ್ದು, ರಾಜ್ಯದ 6 ಪ್ರಮುಖ ಸಾರಿಗೆ ನೌಕರರ ಸಂಘಟನೆಗಳು ಒಕ್ಕೂಟ ಸೇರಿ ಈ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಪ್ರಧಾನ ಬೇಡಿಕೆಗಳಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ವಿಚಾರಗಳನ್ನು ಸರ್ಕಾರದಿಂದ ಈಡೇರಿಸುವಂತೆ ಸಾರಿಗೆ ನೌಕರರು ಒತ್ತಾಯಿಸಿದ್ದಾರೆ. ಈ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿದರೆ, ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ನೌಕರರು ನೀಡಿದ್ದಾರೆ.

ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ., ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ., ಕೆ.ಕೆ.ಆರ್.ಟಿ.ಸಿ. ಸೇರಿ ನಾಲ್ಕು ನಿಗಮಗಳಿಂದ ಈ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಪ್ರಯಾಣಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆಯಿದೆ.ಇದನ್ನು ಓದಿ –ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್‌ಪ್ರೆಸ್‌ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ

ಸರ್ಕಾರ ಮತ್ತು ನೌಕರರ ನಡುವೆ ಏನೇನಾದರೂ ಸೂಕ್ತ ತೀರ್ಮಾನಕ್ಕೆ ಬರಲಿಲ್ಲವಾದರೆ, ಈ ಮುಷ್ಕರ ರಾಜ್ಯದ ಸಾರಿಗೆ ವ್ಯವಸ್ಥೆಗೆ ದೊಡ್ಡ ಹೊಡೆತ ನೀಡುವ ಸಾಧ್ಯತೆಯಿದೆ.

Copyright © All rights reserved Newsnap | Newsever by AF themes.
error: Content is protected !!