ಕುತಂತ್ರ ರೂಪಿಸಿ ಎಟಿಎಂ ದರೋಡೆ
ಕಳ್ಳರು ಮೊದಲಾಗಿ ಎಟಿಎಂ ಒಳಗೆ ಮುಖದ ಗುರುತು ಸಿಸಿಟಿವಿಯಲ್ಲಿ ಬರುವಂತೆ ತಡೆಯಲು ಕ್ಯಾಮೆರಾಗಳಿಗೆ ಬಣ್ಣದ ಸ್ಪ್ರೇ ಬಳಿಸಿದ್ದಾರೆ. ಬಳಿಕ, ಆಂಧ್ರ ಪ್ರದೇಶ ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದು, ಅದರಿಂದಲೇ ಗ್ಯಾಸ್ ಕಟರ್ ಬಳಸಿ ಎಟಿಎಂ ಶೆಟರ್ ಕತ್ತರಿಸಿ ಹಣ ಕಳ್ಳತನ ಮಾಡಿದ್ದಾರೆ.
ಹೊಸಕೋಟೆ ಮಾರ್ಗವಾಗಿ ಪರಾರಿಯಾದ ಖದೀಮರು
ಎಟಿಎಂ ದರೋಡೆ ಬಳಿಕ, ದುಷ್ಕರ್ಮಿಗಳು ಹೊಸಕೋಟೆ ಮಾರ್ಗವಾಗಿ ಪರಾರಿಯಾಗಿದ್ದಾರೆ. ಈ ಕುರಿತಂತೆ ಮಾಹಿತಿ ತಿಳಿದ ಕೂಡಲೇ, ಬೆಂಗಳೂರು ಗ್ರಾಮಾಂತರ ಎಸ್.ಪಿ ಸಿ.ಕೆ. ಬಾಬಾ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನು ಓದಿ –ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ನಿರ್ಧಾರ – ಶೀಘ್ರದಲ್ಲೇ ಅಧಿಕೃತ ಘೋಷಣೆ!
ಪೊಲೀಸರ ತನಿಖೆ ಆರಂಭ
ಘಟನೆಯ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ದುಷ್ಕರ್ಮಿಗಳನ್ನು ಹಿಡಿಯಲು ವಿಶೇಷ ತಂಡ ರಚಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು