March 6, 2026

Newsnap Kannada

The World at your finger tips!

stone peltation

ಮೈಸೂರು: ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ

Spread the love

ಮೈಸೂರು: ಅವಹೇಳನಕಾರಿ ಪೋಸ್ಟ್ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಕಲ್ಲು ತೂರಾಟ ನಡೆಸಿದೆ.

ಈ ದಾಳಿಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ ಮತ್ತು 10 ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಹಾನಿಗೊಳಗಾಗಿವೆ.

ಘಟನೆಯಲ್ಲಿ ಎಸಿಪಿ ಶಾಂತ ಮಲ್ಲಪ್ಪ, ನಜರಬಾದ್ ಇನ್‌ಸ್ಪೆಕ್ಟರ್ ಮಹದೇವಸ್ವಾಮಿ ಸೇರಿದಂತೆ 14 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ.ಇದನ್ನು ಓದಿ -ಭಾರತೀಯ ಗ್ರಂಥಾಲಯ ಪಿತಾಮಹ -ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್

ಅವರಾಹತಿಗೆ ಒಳಗಾದ ವಾಹನಗಳಿಗೂ ಹಾನಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸರನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ಅಧಿಕಾರಿಗಳು ಶಾಂತಿ ಕಾಪಾಡಲು ಜನತೆಗೆ ಮನವಿ ಮಾಡಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

error: Content is protected !!