ಕಾಂಗ್ರೆಸ್ ಪಾದಯಾತ್ರೆ ತಕ್ಷಣವೇ ನಿಲ್ಲಿಸಿ- ಡಿಸಿ ಎಸ್ಪಿಗೆ ಸರ್ಕಾರ ಆದೇಶ – ನಾಯಕರ ಬಂಧನ ಸಾಧ್ಯತೆ

Team Newsnap
1 Min Read

ರಾಜ್ಯ ಸರ್ಕಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ.
ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ.

ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ.  ಈ ಹಿನ್ನೆಲೆಯಲ್ಲಿ ಎಡಿಜಿಪಿ ಹಂತದ ಅಧಿಕಾರಿಗಳು ರಾಮನಗರಕ್ಕೆ ದೌಡಾಯಿಸಿದ್ದಾರೆ.

ಒಂದು ವೇಳೆ ಪಾದಯಾತ್ರೆ ನಿಲ್ಲಿಸದೇ ಹೋದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುವ ಸಾಧ್ಯತೆ. ಹೀಗಾಗಿ ಹೆಚ್ಚುವರಿ ಪೋಲಿಸ್ ಸಿಬ್ಬಂದಿಗಳನ್ನು ಕರೆಸಲಾಗಿದೆ,

ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ರಾಮನಗರ ಎಸ್‌ಪಿ, ಡಿಸಿಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಸೂಚನೆ ನೀಡಿದ್ದಾರೆ.

ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ.

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ಆಯೋಜಿಸಿದೆ. ಈ ಪಾದಯಾತ್ರೆಯಿಂದ ಕೊರೊನಾ ಮತ್ತಷ್ಟು ಹೆಚ್ಚಳವಾಗಲಿದೆ. ಈ ಪಾದಯಾತ್ರೆಯನ್ನು ಕೈಗೊಂಡವರ ವಿರುದ್ಧ ಕ್ರಮಕ್ಕೆ ಆದೇಶ ನೀಡಬೇಕೆಂದು ಕೋರಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

Share This Article
Leave a comment