ಮಸೀದಿಗಳಲ್ಲಿ ಮೈಕ್ ಹಾಕಿ ಕೂಗುವುದನ್ನು ನಿಲ್ಲಿಸಿ – ಮುತಾಲಿಕ್

Team Newsnap
1 Min Read

ಮಸೀದಿಗಳಲ್ಲಿ ಹಾಕಿರುವ ಧ್ವನಿವರ್ಧಕ ತೆಗೆಯದಿದ್ದರೆ ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.

ಧಾರಾಡದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುತಾಲಿಕ್ , 6 ತಿಂಗಳ ಹಿಂದೆ ನಮ್ಮ ಸಂಘಟನೆಯೂ ಮೈಕ್ ಬಗ್ಗೆ ಮನವಿ ಮಾಡಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಆಧಾರದ ಮೇಲೆ ನಡೆದುಕೊಳ್ಳಲು ಕೇಳಿದ್ದೇವೆ. ಬೆಳಗ್ಗೆ 5 ಗಂಟೆಗೆ ಲೌಡ್ ಸ್ಪೀಕರ್ ಹಾಕುವುದನ್ನು ತಡೆಯಲು ಮನವಿ ಮಾಡಿದ್ದೆವು. ಮೊದಲು ತಹಸೀಲ್ದಾರರಿಗೆ ಮನವಿ ಮಾಡಿದ್ದೆವು. ಆದರೆ ಎಲ್ಲಿಯೂ ತಹಸೀಲ್ದಾರರು ಕ್ರಮ ಕೈಗೊಳ್ಳಲಿಲ್ಲ. ಧ್ವನಿ ಮಾಲಿನ್ಯ ಆಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೂ ಮನವಿ ಮಾಡಿದ್ದೆವು. ಆದರೂ ಪ್ರಯೋಜನವಾಗಲಿಲ್ಲ ಎಂದರು. 

ಈಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಕೊನೆಯ ಎಚ್ಚರಿಕೆಯಾಗಿ ಮನವಿ ಸಲ್ಲಿಸುತ್ತಿದ್ದೇವೆ. ಕೋರ್ಟ್ ಆದೇಶ ಪಾಲಿಸಲು ಮುಸ್ಲಿಂ ಸಮಾಜಕ್ಕೆ ಸರ್ಕಾರ ಹೇಳಬೇಕು. ಅವರ ಪ್ರಾರ್ಥನೆಗೆ ನಮ್ಮ ವಿರೋಧ ಇಲ್ಲ. ಆದರೆ ಧ್ವನಿವರ್ಧಕಗಳ ಬಳಕೆಗೆ ವಿರೋಧ ಇದೆ. ಇದರಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತಿದೆ ಎಂದರು.

ಕೋರ್ಟ್ ಆದೇಶವಿದ್ದರೂ ಅವರು ಪಾಲಿಸುತ್ತಿಲ್ಲ. ಇದರಿಂದ ಲಕ್ಷಾಂತರ ಜನರಿಗೆ ತೊಂದರೆಯಾಗಿದೆ. ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಧ್ವನಿ ವರ್ಧಕ ಬಳಸುವಂತಿಲ್ಲ. ಕೋರ್ಟ್ ಇದನ್ನು ಸ್ಪಷ್ಟವಾಗಿ ಹೇಳಿದೆ. ನಿಶಬ್ಧ ವಲಯ ಎಂದು ಸರ್ಕಾರ ಗುರುತಿಸಿದ ಜಾಗದಲ್ಲೂ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲ ಎಂದರು.

Share This Article
Leave a comment