ಭಾರೀ ಬಿರುಗಾಳಿಗೆ ಕಾರು, ಬೈಕ್ ಮೇಲೆ ಬಿದ್ದ ತೆಂಗಿನ ಮರ ಬಿದ್ದ ಪರಿಣಾಮ 12 ವರ್ಷದ ಬಾಲಕಿ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರ ಗಾಯವಾಗಿ ಗಾಯಗೊಂಡ ಘಟನೆ ದೊಡ್ಡಪಾಳ್ಯದೊಡ್ಡಿ ಬಳಿಯ ಶ್ರೀರಂಗಪಟ್ಟಣ-ಬನ್ನೂರು ರಸ್ತೆಯಲ್ಲಿ ನಡೆದಿದೆ.
KRS ಗ್ರಾಮದ ನಾಗರಾಜು, ಪ್ರೇಮ ದಂಪತಿಯ ಪುತ್ರಿ ಪ್ರಿಯಾಂಕಾ (12) ಮೃತಪಟ್ಟಿರುವ ಬಾಲಕಿ . ತಂದೆ-ತಾಯಿ ಜೊತೆ ಬೈಕ್ನಲ್ಲಿ ಸಂಬಂಧಿಕರ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಜರುಗಿದೆ
ದೊಡ್ಡಪಾಳ್ಯದೊಡ್ಡಿ ಬಳಿ ಬರುತ್ತಿದ್ದಂತೆ ವೇಳೆ ಬಿರುಗಾಳಿ ಹೆಚ್ಚಾಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬೃಹತ್ ತೆಂಗಿನ ಮರ ಬೈಕ್ ಮೇಲೆ ಬಿದ್ದಿದೆ.
ಈ ಘಟನೆಯಲ್ಲಿ ಬೈಕ್ ಮುಂದೆ ಕುಳಿತ್ತಿದ್ದ ನಾಗರಾಜು ಹಾಗೂ ಪುತ್ರಿ ಪ್ರಿಯಾಂಕಗೆ ಗಂಭೀರ ಗಾಯಗೊಂಡಿದ್ದರು. ರಕ್ತದ ಮಡುವಿನಲ್ಲಿ ನರಳುತ್ತಿದ್ದವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಪ್ರಿಯಾಂಕ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ ನಾಗರಾಜ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಂಬದಿ ಕುಳಿತಿದ್ದ ಪತ್ನಿ ಪ್ರೇಮಾ ಹಾಗೂ ಪುತ್ರ ಚೇತನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇದೇ ವೇಳೆ ಕಾರಿನ ಮೇಲೂ ಮರ ಬಿದ್ದಿದ್ದು, ಪಿಹಳ್ಳಿ ಗ್ರಾಮದ ನಾಗಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ