May 22, 2022

Newsnap Kannada

The World at your finger tips!

male c

ಮಂಡ್ಯದಲ್ಲಿ ಭಾರಿ ಬಿರುಗಾಳಿ: ಬೈಕ್ ಮೇಲೆ ಬಿದ್ದ ತೆಂಗಿನ ಮರ- ಬಾಲಕಿ ಸ್ಥಳದಲ್ಲೇ ಸಾವು

Spread the love

ಭಾರೀ ಬಿರುಗಾಳಿಗೆ ಕಾರು, ಬೈಕ್ ಮೇಲೆ ಬಿದ್ದ ತೆಂಗಿನ ಮರ ಬಿದ್ದ ಪರಿಣಾಮ 12 ವರ್ಷದ ಬಾಲಕಿ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರ ಗಾಯವಾಗಿ ಗಾಯಗೊಂಡ ಘಟನೆ ದೊಡ್ಡಪಾಳ್ಯದೊಡ್ಡಿ ಬಳಿಯ ಶ್ರೀರಂಗಪಟ್ಟಣ-ಬನ್ನೂರು ರಸ್ತೆಯಲ್ಲಿ ನಡೆದಿದೆ.

KRS ಗ್ರಾಮದ ನಾಗರಾಜು, ಪ್ರೇಮ ದಂಪತಿಯ ಪುತ್ರಿ ಪ್ರಿಯಾಂಕಾ (12) ಮೃತಪಟ್ಟಿರುವ ಬಾಲಕಿ . ತಂದೆ-ತಾಯಿ ಜೊತೆ ಬೈಕ್​ನಲ್ಲಿ ಸಂಬಂಧಿಕರ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಜರುಗಿದೆ

ದೊಡ್ಡಪಾಳ್ಯದೊಡ್ಡಿ ಬಳಿ ಬರುತ್ತಿದ್ದಂತೆ ವೇಳೆ ಬಿರುಗಾಳಿ ಹೆಚ್ಚಾಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬೃಹತ್ ತೆಂಗಿನ ಮರ ಬೈಕ್ ಮೇಲೆ ಬಿದ್ದಿದೆ.

ಈ ಘಟನೆಯಲ್ಲಿ ಬೈಕ್ ಮುಂದೆ ಕುಳಿತ್ತಿದ್ದ ನಾಗರಾಜು ಹಾಗೂ ಪುತ್ರಿ ಪ್ರಿಯಾಂಕಗೆ ಗಂಭೀರ ಗಾಯಗೊಂಡಿದ್ದರು. ರಕ್ತದ ಮಡುವಿನಲ್ಲಿ ನರಳುತ್ತಿದ್ದವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಪ್ರಿಯಾಂಕ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ನಾಗರಾಜ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಂಬದಿ ಕುಳಿತಿದ್ದ ಪತ್ನಿ ಪ್ರೇಮಾ ಹಾಗೂ ಪುತ್ರ ಚೇತನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇದೇ ವೇಳೆ ಕಾರಿನ ಮೇಲೂ ಮರ ಬಿದ್ದಿದ್ದು, ಪಿಹಳ್ಳಿ ಗ್ರಾಮದ ನಾಗಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ

ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

error: Content is protected !!