ಗಲಭೆಕೋರರ ವಿರುದ್ಧ ಕಠಿಣ ಕ್ರಮ

Team Newsnap
1 Min Read
  • ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಬೆಳಗಾವಿ : ಕೋಮು ಗಲಭೆಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಸಮಾಜದಲ್ಲಿ ಕೋಮುಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದು ಬಿಜೆಪಿ ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸ. ಅವರು ಮಾಡುವ ಆರೋಪ ಸತ್ಯವಲ್ಲ. ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಕುರುಬ ಸಮಾಜ ಸಮಾವೇಶದ ಸಂದರ್ಭದಲ್ಲಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉತ್ತರಿಸಿದ ಅವರು, ನಮ್ಮ ಸರ್ಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಎಲ್ಲರನ್ನೂ ಒಳಗೊಂಡಂತಹ ಆಡಳಿತದ ನೀತಿ ನಮ್ಮ ಸರ್ಕಾರ ಹೊಂದಿದೆ ಎಂದು ತಿಳಿಸಿದರು.ಶ್ರೀರಂಗಪಟ್ಟಣ ದಸರಾಗೆ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ: ಡಿಸಿ ಡಾ:ಕುಮಾರ್

ತಮ್ಮ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ವಿಭಜನೆ ಆಗಲಿದೆಯೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಶಾಸಕರ ಜೊತೆ ಚರ್ಚಿಸಿ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.

Share This Article
Leave a comment