ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಶಾಲಾ-ಕಾಲೇಜುಗಳು ಬಂದ್

Team Newsnap
2 Min Read
Indefinite strike of government employees from tomorrow: Schools and colleges Bandh ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಶಾಲಾ-ಕಾಲೇಜುಗಳು ಬಂದ್

ರಾಜ್ಯ ಸರ್ಕಾರಿ ನೌಕರರು ನಾಳೆಯಿಂದ (ಮಾರ್ಚ್ 1 ರಿಂದ )ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆ ನಾಳೆ ಬಹುತೇಕ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ರಾಜ್ಯಾದ್ಯಂತ ಸರ್ಕಾರಿ ಶಾಲಾ ಕಾಲೇಜುಗಳು ಕೂಡ ಬಂದ್ ಆಗಲಿದೆ ಎನ್ನಲಾಗಿದೆ.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಶಾಲಾ ಶಿಕ್ಷಕರು ಕೂಡ ಕೈ ಜೋಡಿಸಿದ್ದಾರೆ, ನಾಳೆ ಶಾಲಾ ಕಾಲೇಜುಗಳು ಬಂದ್ ಆಗಲಿದೆ ಎಂದು ಶಾಲಾ ರಾಜ್ಯಾಧ್ಯಕ್ಷ ಶಂಭುಗೌಡ ಹೇಳಿಕೆ ನೀಡಿದ್ದಾರೆ.

ಶಾಲಾ ಕಾಲೇಜು ಶಿಕ್ಷಕರು ಕೂಡ ಈ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ, ನಾಳೆ ಶಾಲೆಗಳಿಗೆ ಮಕ್ಕಳನ್ನು ಬರಬೇಡಿ ಎಂದು ಹೇಳಿದ್ದೇವೆ ಎಂದಿದ್ದಾರೆ.

ಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಶಿಕ್ಷಕರ ಸಂಘ ಕರೆ ನೀಡಿದೆ

ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವಂತೆ ಶಿಕ್ಷಕರ ಸಂಘ ಕರೆ ನೀಡಿದೆ. ರಾಜ್ಯ ನೌಕರರ ಮನವೊಲಿಸಲು ಸರ್ಕಾರ ಕಸರತ್ತು ಮಾಡುತ್ತಿದ್ದು, ಇದೀಗ ಸಂಜೆ ಸಿಎಂ ಸೂಚನೆ ಮೇರೆಗೆ ಸಿಎಸ್ ನೇತೃತ್ವದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.

ಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಶಿಕ್ಷಕರ ಸಂಘ ಕರೆ ನೀಡಿದೆ. ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಬಲ ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವಂತೆ ಶಿಕ್ಷಕರಿಗೆ ಕರೆ ನೀಡಿದೆ.

7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆ ಸರ್ಕಾರಿ ನೌಕರರ ಜೊತೆ ಮಾತುಕತೆ ನಡೆಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಸಿ.ಎಸ್ ವಂದಿತಾ ಶರ್ಮಾ ಸಭೆ ಕರೆದಿದ್ದರು.

ವಿಧಾನಸೌಧದಲ್ಲಿ ನಡೆದ ಸರ್ಕಾರಿ ನೌಕರರ ನಿಯೋಗದ ಜೊತಗಿನ ಸಭೆ ಮುಕ್ತಾಯವಾಗಿದ್ದು, ಎಸ್ ವಂದಿತಾ ಶರ್ಮಾ ಸಂಜೆವರೆಗೂ ಕಾಲಾವಕಾಶ ಕೇಳಿದ್ದಾರೆ ಎಂದು ಸಭೆ ಬಳಿಕ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೇವೆ, ಅವರು ಸಂಜೆವರೆಗೂ ಕಾಲಾವಕಾಶ ಕೇಳಿದ್ದಾರೆ ಎಂದರು.

ಸರ್ಕಾರಿ ನೌಕರರ ಮನವೊಲಿಸಲು ಸಿಎಂ ಬಸವರಾಜ ಬೊಮ್ಮಾಯಿ ಕಸರತ್ತು ನಡೆಸಿದ್ದಾರೆ, ಇದೀಗ ಸಂಜೆ ಸಿಎಸ್ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಲು ನಿರ್ಧರಿಸಲಾಗಿದೆ.

ಮಾಜಿ ಪ್ರಧಾನಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

Share This Article
Leave a comment