ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದವರ ಆಸ್ತಿ ಮುಟ್ಟುಗೋಲಿಗೆ ಎಸ್‍ಟಿಎಸ್ ನಿರ್ದೇಶನ

Team Newsnap
1 Min Read

ಮೈಸೂರಿನಲ್ಲಿ ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಈ ವಿಷಯವನ್ನು ಬೆಳಗಾವಿಯ ಸುವಣ೯ ಸೌಧದಲ್ಲಿ ಸುದ್ದಿಗಾರರಿಗೆ ತಿಳಿಸಿದ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್
ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರು ಮಾಡಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ನಕಲಿ ತುಪ್ಪ ತಯಾರಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.

ರುಚಿ, ಪರಿಶುದ್ಧತೆಯ ಮೂಲಕ ನಂದಿನಿ ತುಪ್ಪ ಸಾಕಷ್ಟು ಪ್ರಖ್ಯಾತಿ ಆಗಿದೆ. ನಿತ್ಯ ನೂರು ಟನ್‍ಗೂ ಹೆಚ್ಚು ತುಪ್ಪ ಉತ್ಪಾದನೆ ಮಾಡಲಾಗುತ್ತದೆ. ತಿರುಪತಿ, ಅಯೋಧ್ಯೆಗೆ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ಸೇನೆಗೂ ಸಹ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದರೆ ಸಾರ್ವಜನಿಕರು ಕೆಎಂಎಫ್ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಕೋರಿದರು.

Share This Article
Leave a comment