ನಿಖಿಲ್ ಮೃತ ವಿದ್ಯಾರ್ಥಿ. ಮೃತ ವಿದ್ಯಾರ್ಥಿ ನಿಖಿಲ್ ಎಎಂಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಹೋಟೆಲ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಓದುತ್ತಿದ್ದ.
ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಕಾಲೇಜು ಡೀನ್ ತಾಯಿಯ ಎದುರೇ ಅವಾಚ್ಯ ಶಬ್ದಗಳಿಂದ ನಿಂದಿಸಿದಂತೆ. ಹೀಗಾಗಿ ಮನೆಯಲ್ಲಿದ್ದ ಮಾತ್ರೆಗಳನ್ನು ಸೇವಿಸಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ .
ಅಸ್ವಸ್ಥನಾಗಿದ್ದ ವಿದ್ಯಾರ್ಥಿಯನ್ನು ಕೂಡಲೇ ನಾಗರಬಾವಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.
ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಮಗನ ಮೃತದೇಹವನ್ನು ಪಡೆದುಕೊಂಡು ಕಾಲೇಜು ಬಳಿ ಕೊಂಡೊಯ್ಯಲು ಪೋಷಕರು ಯತ್ನಿಸಿದ್ದರು. ಆದರೆ ಕೆ.ಆರ್ ಮಾರುಕಟ್ಟೆ ಬಳಿ ಪೋಷಕರನ್ನು ತಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು