ಕಾರವಾರ: ಆಟವಾಡುವ ವೇಳೆ ಬಲೂನ್ ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ವಿದ್ಯಾರ್ಥಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.
ನವೀನ ನಾರಾಯಣ ಬೆಳಗಾಂವಕರ್ (13) ಮೃತ ವಿದ್ಯಾರ್ಥಿ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದುವ ಸಮಯದಲ್ಲಿ ಬಲೂನ್ ಬಾಯಿಯ ಒಳಗೆ ಜಾರಿ ಗಂಟಲಲ್ಲಿ ಸಿಲುಕಿಕೊಂಡಿದೆ.
ಬಲೂನ್ ಗಂಟಲಲ್ಲಿ ಸಿಲುಕಿ ಉಸಿರಾಟಕ್ಕೆ ತೀವ್ರ ತೊಂದರೆ ಉಂಟಾಗಿ ಒದ್ದಾಡುತ್ತಿದ್ದ ನವೀನನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಉಸಿರಾಟ ಪುನಃಾರಂಭಿಸಲು ಸಾಧ್ಯವಾಗದೇ ಆತ ಅಲ್ಲಿ ಕೊನೆಯುಸಿರೆಳೆದಿದ್ದಾನೆ.ಇದನ್ನು ಓದಿ –ರಾಜ್ಯ ಸರ್ಕಾರದಿಂದ 6 ಕೆಎಎಸ್ ಅಧಿಕಾರಿಗಳ ಸ್ಥಳಾಂತರ: ಹೊಸ ಆದೇಶ ಹೊರಡಿಕೆ
ಈ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣವನ್ನು ಮೂಡಿಸಿದ್ದು, ಬಾಲಕನ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.
More Stories
ಕರ್ನಾಟಕದಲ್ಲಿ ‘ಪುಷ್ಪ 2’ಗೆ ಶಾಕ್- ಪ್ರದರ್ಶನ ರದ್ದಿಗೆ ಆದೇಶ
ಮುಂದಿನ ಪೀಳಿಗೆಗೊಂದು ಉತ್ತಮ ಸಂದೇಶ
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ