ಗೀತಂ ಯೂನಿವರ್ಸಿಟಿ ಹಾಸ್ಟೆಲ್ನ 6 ನೇ ಮಹಡಿಯಿಂದ ವಿದ್ಯಾರ್ಥಿನಿಯೋರ್ವಳು ಅನುಮಾನಾಸ್ಪದವಾಗಿ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿಯಲ್ಲಿ ನಡೆದಿದೆ. ಉಗಾಂಡ ಮೂಲದ ಹಸೀನಾ (24) ಮೃತ ದುರ್ದೈವಿ.
ಗೀತಂ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದರು. ರಾತ್ರಿ 11 ಗಂಟೆ ಸುಮಾರಿಗೆ 6ನೇ ಮಹಡಿಯಿಂದ ಮೊದಲನೇ ಮಹಡಿಗೆ ವಿದ್ಯಾರ್ಥಿನಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಯಿತು. ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾಳೆ.
ವಿದ್ಯಾರ್ಥಿನಿ ಸಾವಿನ ಬೆನ್ನಲ್ಲೇ ಅಲ್ಲಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿವಿ ಕಟ್ಟಡದ ಗ್ಲಾಸ್ಗಳನ್ನು ಪುಡಿಪುಡಿ ಮಾಡಿದ್ದಾರೆ. ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಹೊಡೆದು ಪುಡಿ ಪುಡಿ ಮಾಡಿದ್ದಾರೆ.
ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಅನ್ನುವ ಶಂಕೆಯೂ ಇದೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ